ಕಲಬುರಗಿ: ವಿದ್ಯುತ್ ತಂತಿ ತಗುಲಿ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಖಮರ್ ಕಾಲೊನಿಯಲ್ಲಿ ನಡೆದಿದೆ.
ಮಹಮ್ಮದ್ ರಿಯಾಜುದ್ದಿನ್ (12) ಗಂಭೀರವಾಗಿ ಗಾಯಗೊಂಡ ಬಾಲಕ.
ಮನೆಯ ಮೇಲ್ಚಾವಣಿ ಮೇಲಿಂದ ಹಾದು ಹೋಗಿರುವ ಕರೆಂಟ್ ತಂತಿಯಿಂದ ಅನಾಹುತ ಸಂಭವಿಸಿದೆ. ಆಟವಾಡುತ್ತಿದ್ದ ವೇಳೆ ಬಾಲಕ ವಿದ್ಯುತ್ ತಂತಿಯನ್ನು ಮುಟ್ಟಿದ್ದಾನೆ. ಪರಿಣಾಮ ಆತನ ದೇಹದ ಶೇ 40 ಭಾಗ ಸುಟ್ಟು ಹೊಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿದೆ.
ಜೆಸ್ಕಾಂ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.