ಮಡಿಕೇರಿ: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸಿಲ್ವರ್ ಏಣಿ ತಗುಲಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತಾಲೂಕಿನ ದೊಡ್ಡಪುಲಿಕೋಟು ಗ್ರಾಮದಲ್ಲಿ ನಡೆದಿದೆ.
ತಮ್ಮಯ್ಯ, ಅನಿಲ್ ಹಾಗೂ ಕವಿತಾ ಮೃತರು. ಜೊತೆಯಲ್ಲಿದ್ದ ಸುಮಿತ್ರಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಸುರೇಶ್ ಎಂಬುವರ ತೋಟದಲ್ಲಿ ಮರ ಕಡಿಯುವ ವೇಳೆ ಈ ದುರ್ಘಟನೆ ನಡೆದಿದೆ. ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.