ಬೆಂಗಳೂರು: ಕಳೆದ 14 ತಿಂಗಳಿನಿಂದ ರಾಜ್ಯ ಕೋವಿಡ್ ಸಂಕಷ್ಟವನ್ನು ಎದುರಿಸುತ್ತಿದೆ. ಈ ಅವಧಿಯಲ್ಲಿ ಸರ್ಕಾರ ಎರಡು ಬಾರಿ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಕಷ್ಟದಲ್ಲೂ ರಾಜ್ಯ ಸರ್ಕಾರ 1,250 ಕೋಟಿ ರೂ. ಪ್ಯಾಕೇಜ್ ಘೋಷಿಸುವುದರ ಮೂಲಕ ರಾಜ್ಯದ ಎಲ್ಲ ಶ್ರಮಿಕ ವರ್ಗದವರ ಪರವಾಗಿ ನಿಂತಿದೆ ಎಂದು ಸಚಿವರು ಹೇಳಿದ್ದಾರೆ.
ಶ್ರಮಿಕ ವರ್ಗದವರಿಗೆ ಧನ ಸಹಾಯ, ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಪಡಿತರ ನೀಡುತ್ತಿರುವುದು ಸ್ವಾಗತಾರ್ಹ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅತ್ಯಂತ ಸಮರ್ಥವಾಗಿ ನಡೆಸುತ್ತಿದ್ದಾರೆ ಎಂದಿದ್ದಾರೆ.
ಕೋವಿಡ್ ಸಂಕಷ್ಟ ಆರಂಭವಾದಾಗಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಟೀಕೆ ಮಾಡುವುದನ್ನು ಬಿಟ್ಟು ಬೇರೆ ಕೆಲಸ ಮಾಡಿಲ್ಲ. ಮೊಸರಲ್ಲಿ ಕಲ್ಲು ಹುಡುಕುವುದನ್ನು ಬಿಟ್ಟು ಸಮಾಜದ ಪ್ರತಿವೊಬ್ಬರು ತಮ್ಮ ಜವಾಬ್ದಾರಿಯನ್ನು ತೋರಿಸಲು ಮುಂದಾಗಲಿ ಎಂದು ಸಚಿವರು ಹೇಳಿದ್ದಾರೆ.