ಶಿವಮೊಗ್ಗ: ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣವಚನ ಬೋಧಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳವರು.ಭಾರತದ ಪ್ರಜೆಗಳಾದ ನಾವೆಲ್ಲಾ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.
ನಮ್ಮ ಸಹ ಬಾಂಧವರಲ್ಲಿ ಶಾಂತಿ ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು, ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಕಚೇರಿಯ ಸಿಬ್ಬಂದಿಗಳಿಗೆ ಪ್ರಮಾಣ ವಚನ ಬೋಧಿಸಿದರು.