ಕೊಪ್ಪಳ: ಕೊರೊನಾ ಕೇರ್ ಸೆಂಟರ್ವೊಂದರಲ್ಲಿ ಸರಿಯಾಗಿ ಊಟ ಸಿಗದೇ ಸೋಂಕಿತರು ಪರದಾಡುತ್ತಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೊರೊನಾ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರು ಸೆಂಟರ್ನಿಂದ ಹೊರಹೋಗಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯಲ್ಲಿ ಕನಕಗಿರಿ ಕ್ಷೇತ್ರ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ ಎಂದು ಕ್ಷೇತ್ರದ ಶಾಸಕರು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಆದರೆ, ಕನಕಗಿರಿ ಕ್ಷೇತ್ರದಲ್ಲಿನ ಕೋವಿಡ್ ಕೇರ್ ಸೆಂಟರ್ನಲ್ಲಿ ಈ ಅವ್ಯವಸ್ಥೆ ಕೇಳಿ ಬಂದಿದ್ದು, ಆಡಳಿತ ವ್ಯವಸ್ಥೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.