ಮಂಡ್ಯ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಜಿಲ್ಲಾ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ರಾಮನಗರ ಪ್ರವಾಸದ ನಂತರ ಜಿಲ್ಲೆಗೆ ಆಗಮಿಸಿದ ಸಚಿವರು, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಮಾಡಿದರು. ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ತೆಗೆದುಕೊಂಡ ಮುನ್ನೆಚ್ಚರಿಕೆ, ಅಪರಾಧ ಪ್ರಕರಣಗಳು ಮತ್ತು ಅಪಘಾತ ಪ್ರಕರಣ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ ಸಮಸ್ಯೆಗಳ ಕುರಿತು ಅಧಿಕಾರಿಗಳ ಚೊತೆ ಚರ್ಚೆ ಮಾಡಿದರು.
ಜೊತೆಗೆ ಪೊಲೀಸ್ ಅಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಡಿಸಿ ವೆಂಕಟೇಶ್, ಸಿಇಒ ಯಾಲಕ್ಕಿಗೌಡ ಸೇರಿ ಹಲವು ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದರು.
ಅಧಿಕಾರಿಗಳ ಮಾಹಿತಿಗೆ ಗೃಹ ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪೊಲೀಸ್ ಇಲಾಖೆಯ ಸಮಸ್ಯೆಗಳನ್ನು ಆಲಿಸಿದ್ದಾರೆ.