ಚಿತ್ರದುರ್ಗ: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಇದೇ ತಿಂಗಳು 18ರಂದು ನಡೆಯಲಿದ್ದು, ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೆಂದ್ರಗಳಲ್ಲಿ 15512 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೆಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮೊಬೈಲ್, ಡಿಜಿಟಲ್ ಸ್ಮಾರ್ಟ್ ವಾಚ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ ಬಂಡಲ್ ತಲುಪಿಸುವ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮಾಧ್ಯಮದವರ ಪ್ರವೇಶವನ್ನು ನಿಷೇಧಿಸಲಾಗಿದೆ.
ಪ್ರತೀ 200 ವಿದ್ಯಾರ್ಥಿಗಳಿಗೆ 1ರಂತೆ ಆರೋಗ್ಯ ತಪಾಸಣಾ ಕೌಂಟರ್ ತೆರೆದು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಪರೀಕ್ಷೆ ಬೆಳಿಗ್ಗೆ 10-30 ಗಂಟೆಗೆ ಪ್ರಾರಂಭವಾಗಲಿದೆಯಾದರೂ ವಿದ್ಯಾರ್ಥಿಗಳು ಬೆಳಿಗ್ಗೆ 8-30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳ ನಡುವೆ 1 ಮೀಟರ್ ಅಂತರದಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲಾಗುವುದು. ಇದಕ್ಕಾಗಿ 20 ಪರೀಕ್ಷಾ ಕೇಂದ್ರಗಳ ಜೊತೆಗೆ 15 ಹೆಚ್ಚುವರಿ ಬ್ಲಾಕ್‍ಗಳನ್ನು ವಿದ್ಯಾರ್ಥಿಗಳ ಆಸನ ವ್ಯವಸ್ಥೆಗಾಗಿ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಚಿತ್ರದುರ್ಗದಲ್ಲಿ ಸಕಲ ಸಿದ್ಧತೆ - Chitradurga puc exam preparation
ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬಾಕಿ ಉಳಿದಿದ್ದ ಇಂಗ್ಲಿಷ್ ವಿಷಯದ ಪರೀಕ್ಷೆ ಇದೇ ತಿಂಗಳು 18ರಂದು ನಡೆಯಲಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೆಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.