ETV Bharat / briefs

ಕಲಬುರಗಿ: ಗಡಿಯಲ್ಲಿ ಚೀನಾ ಕ್ಯಾತೆ ಖಂಡಿಸಿ ಪ್ರತಿಭಟನೆ

ಭಾರತ- ಚೀನಾ ಗಡಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಯನ್ನು ಖಂಡಿಸಿ ಕಲಬುರಗಿಯಲ್ಲಿ, ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಹಾಗೂ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಆಗ್ರಹಿಸಿದರು.

Kalburgi
Kalburgi
author img

By

Published : Jun 17, 2020, 4:37 PM IST

ಕಲಬುರಗಿ: ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಚೀನಾ ವಸ್ತು ಬಹಿಷ್ಕಾರಕ್ಕೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಹಾಗೂ ಶ್ರೀರಾಮ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ವಲ್ಲಭಭಾಯ್​ ಪಟೇಲ್ ವೃತ್ತದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, ಚೀನಾದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಗತ್ತಿನಾದ್ಯಂತ ಕೊರೊನಾ ಹರಡಲು ಚೀನಾ ಕಾರಣವಾಗಿದೆ ಎಂದು ಆರೋಪಿಸಿದರು. ಇದೀಗ ಭಾರತ ಗಡಿಯ ಒತ್ತುವರಿ ಮೂಲಕ ಉದ್ಧಟತನ ಮೆರೆಯುತ್ತಿದೆ ಎಂದು ಕಿಡಿಕಾರಿದರು. ಚೀನಾಕ್ಕೆ ಸರಿಯಾದ ಪಾಠ ಕಲಿಸಬೇಕೆಂದು ಪ್ರತಿಭನಟನಾಕಾಕರು ಆಗ್ರಹಿಸಿದರು.

ಇದಕ್ಕೆ ಪೂರಕವಾಗಿ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿ ಪ್ಲೆಕ್ಸ್ ಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರ ಹಾಕಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.