ETV Bharat / briefs

ಕ್ವಾರೆಂಟೈನ್ ಉಲ್ಲಂಘಿಸಿದ 54 ಮಂದಿಯ ಮೇಲೆ ಪ್ರಕರಣ ದಾಖಲು - Home quarantine rules breaks

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋಮ್ ಕ್ವಾರೆಂಟೈನ್ ನಿಯಮವನ್ನು ಉಲ್ಲಂಘಿಸಿದ 54 ಶಂಕಿತರ ಮೇಲೆ ಪ್ರಕರಣ ದಾಖಲಾಗಿದೆ.

Quarantine violation in dakshinakannada district

author img

By

Published : Jun 26, 2020, 10:37 PM IST

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಹೋಮ್ ಕ್ವಾರೆಂಟೈನ್ ನಿಯಮವನ್ನು ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿದ್ದ 54 ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ 10 ಮಂದಿಯ ಮೇಲೆ ಹಾಗೂ ಮಂಗಳೂರಿನಲ್ಲಿ 44 ಮಂದಿಯ ಮೇಲೆ ಪ್ರಕರಣ ದಾಖಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ವಾರೆಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿಗಾ ಇಡಲಾಗಿದೆ. ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿಗಳಲ್ಲದೆ, ಇತರೆ ಇಲಾಖೆ ಅಧಿಕಾರಿ, ಸಿಬ್ಬಂದಿಯೊಂದಿಗೆ ಅಕ್ಕಪಕ್ಕದ ಮನೆಯವರಲ್ಲೂ ಹೋಮ್ ಕ್ವಾರೆಂಟೈನ್ ಇರುವವರ ಮೇಲೆ ನಿಗಾ ಇಡಲು ತಿಳಿಸಲಾಗುತ್ತಿದೆ.

ಜಿಲ್ಲೆಯ ಕ್ವಾರಂಟೈನ್ ನಿಗಾ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಯಾರೇ ಆಗಲಿ‌ ಕ್ವಾರೆಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕೇಸ್​ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.