ಹಾಸನ/ಅರಸೀಕೆರೆ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 20ರಂದು ಅರಸೀಕೆರೆಯ ಸಿಂಧೂ ಭವನದ ಕಲ್ಯಾಣ ಮಂಟಪದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಶಿವಲಿಂಗೇಗೌಡ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೇ ವೇಳೆ ಮೋದಿ, ಮೋದಿ ಎನ್ನುವವರ ದವಡೆಗೆ ಹೊಡೆಯಿರಿ ಎಂಬ ಲಘುವಾದ ಹೇಳಿಕೆ ನೀಡಿದ್ದರು.