ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಾಗು ರಾಹುಲ್ ರಾಜೀನಾಮೆ ವಿಚಾರ ಸಂಬಂಧ ಕಾಂಗ್ರೆಸ್ ಇಂದು ಕಾರ್ಯಕಾರಿ ಸಮಿತಿ ಸಭೆ ನಡೆಸಿತು. ಈ ಮಹತ್ವದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ನೀಡಿದ ರಾಜೀನಾಮೆಯನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ.
-
Delhi: Congress President Rahul Gandhi, General Secretary Priyanka Gandhi Vadra, UPA chairperson Sonia Gandhi and other party leaders leave after the CWC meeting concludes. pic.twitter.com/jrN25Ac5Co
— ANI (@ANI) May 25, 2019 " class="align-text-top noRightClick twitterSection" data="
">Delhi: Congress President Rahul Gandhi, General Secretary Priyanka Gandhi Vadra, UPA chairperson Sonia Gandhi and other party leaders leave after the CWC meeting concludes. pic.twitter.com/jrN25Ac5Co
— ANI (@ANI) May 25, 2019Delhi: Congress President Rahul Gandhi, General Secretary Priyanka Gandhi Vadra, UPA chairperson Sonia Gandhi and other party leaders leave after the CWC meeting concludes. pic.twitter.com/jrN25Ac5Co
— ANI (@ANI) May 25, 2019
ಕಾರ್ಯಕಾರಣಿಯಲ್ಲಿ ರಾಹುಲ್ ಗಾಂಧಿ ಅವರು ನೀಡಿದ ರಾಜೀನಾಮೆಯನ್ನು ತಿರಸ್ಕರಿಸಲಾಗಿದ್ದು, ಅವರ ಸಲಹೆ ಮತ್ತು ಮಾರ್ಗದರ್ಶನ ಪಕ್ಷಕ್ಕೆ ಬೇಕಾಗಿದೆ. ಅವರು ಅಧ್ಯಕ್ಷ ಸ್ಥಾನದಲ್ಲೇ ಮುಂದುವರೆಯಲಿದ್ದಾರೆ ಎಂದು ಕಾರ್ಯಕಾರಣಿ ಬಳಿಕ ನಡೆದ ಪತ್ರಿಕಾಗೋಷ್ಟಿಯಲ್ಲಿ ವಕ್ತಾರ ರಣದೀಪ್ ಸುರ್ಜೇವಾಲ ಮಾಹಿತಿ ನೀಡಿದರು.
ಸಿಡಬ್ಲ್ಯುಸಿ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕ ಗಾಂಧಿ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ್, ಪಾಂಡಿಚೇರಿ ಸಿಎಂಗಳು ಭಾಗಿಯಾಗಿದ್ದರು.
ಲೋಕಸಭಾ ಸೋಲಿಗೆ ರಾಹುಲ್ ಗಾಂಧಿ ಮಾತ್ರ ಹೊಣೆಯಲ್ಲ.ಬದಲಿಗೆ ಎಲ್ಲಾ ರಾಜ್ಯದ ಅಧ್ಯಕ್ಷರೂ ಕಾರಣ. ಒಂದು ವೇಳೆ ರಾಹುಲ್ ಗಾಂಧಿ ರಾಜೀನಾಮೆ ನೀಡುವುದಾದರೆ, ಎಲ್ಲಾ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚೌಹಾಣ್ ತಿಳಿಸಿದ್ದಾರೆ.
542 ಕ್ಷೇತ್ರಗಳ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್ಡಿಎ 353 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದ್ದರೆ, ಕಾಂಗ್ರೆಸ್ ಕೇವಲ 52 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.
ರಾಹುಲ್ ಗಾಂಧಿ ಸಂಸದೀಯ ಕ್ಷೇತ್ರ ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡು ಮುಖಭಂಗ ಅನುಭವಿಸಿದ್ದರು. ಇದರಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಲು ಮುಂದಾದರು ಎನ್ನಲಾಗಿದೆ.