ETV Bharat / briefs

ರೆಮ್ಡೆಸಿವಿರ್ ಹಾಗೂ ಆಕ್ಸಿಜನ್ ಆಭಾವ ತುರ್ತಾಗಿ ಬಗೆಹರಿಸಿ: ಡಿ.ಕೆ. ಸುರೇಶ್ ಒತ್ತಾಯ - ರೆಮ್ ಡಿಸಿವರ್ ಸಮಸ್ಯೆ

ಆಸ್ಪತ್ರೆಗಳಲ್ಲಿ ಹೆಚ್ಚಿನ ಸೋಂಕಿತರಿಗೆ ಚಿಕಿತ್ಸೆ ನೀಡುವ ಸೌಲಭ್ಯವಿದ್ದರೂ ಆಕ್ಸಿಜನ್ ಅಭಾವದಿಂದ ಪೂರ್ಣ ಪ್ರಮಾಣದಲ್ಲಿ ಸೋಂಕಿತರಿಗೆ ಚಿಕಿತ್ಸೆಯನ್ನು ನೀಡಲು ಸಾಧ್ಯವಾಗದೇ, ಕೇವಲ 100 ರಿಂದ 140 ರೋಗಿಗಳಿಗೆ ಚಿಕಿತ್ಸೆಯನ್ನು ನೀಡುತ್ತಿರುತ್ತವೆ. ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಸಾಯುವ ಪರಿಸ್ಥಿತಿ ಉದ್ಭವಾಗಿದೆ ಎಂದು ಸುರೇಶ್ ಉಲ್ಲೇಖಿಸಿದ್ದಾರೆ.

Dk suresh
Dk suresh
author img

By

Published : May 3, 2021, 4:54 PM IST

ಬೆಂಗಳೂರು: ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ರೆಮ್ಡೆಸಿವಿರ್​ ಚುಚ್ಚುಮದ್ದಿನ ಸರಬರಾಜು ಹಾಗೂ ಆಕ್ಸಿಜನ್ ಆಭಾವವನ್ನು ತುರ್ತಾಗಿ ಬಗೆಹರಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಪ್ರಸ್ತುತ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ಆಕ್ಸಿಜನ್ ಮತ್ತು ರೆಮ್ಡೆಸಿವಿರ್​​ ಔಷಧದ ಅಭಾವ ತೀವ್ರವಾಗಿ ತಲೆದೋರಿದೆ ಎಂಬುದನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಕೇವಲ 2 ರಿಂದ 3 ಟನ್ ಆಕ್ಸಿಜನ್ ಮಾತ್ರ ಸರಬರಾಜು

ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಪೂರ್ಣ ಪ್ರಮಾಣದ ಆಕ್ಸಿಜನ್ ಪೂರೈಕೆಗೆ ಪ್ರತಿದಿನ 8 ಟನ್‌ಗಳಷ್ಟು ಅವಶಕ್ಯತೆಯಿದ್ದರೂ ಕೇವಲ 2 ರಿಂದ 3 ಟನ್ ಆಕ್ಸಿಜನ್ ಮಾತ್ರ ಸರಬರಾಜು ಮಾಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಹೆಚ್ಚಿನ ಸೋಂಕಿತರಿಗೆ ಚಿಕಿತ್ಸೆ ನೀಡುವ ಸೌಲಭ್ಯವಿದ್ದರೂ ಆಕ್ಸಿಜನ್ ಅಭಾವದಿಂದ ಪೂರ್ಣ ಪ್ರಮಾಣದಲ್ಲಿ ಸೋಂಕಿತರಿಗೆ ಚಿಕಿತ್ಸೆಯನ್ನು ನೀಡಲು ಸಾಧ್ಯವಾಗದೇ, ಕೇವಲ 100 ರಿಂದ 140 ರೋಗಿಗಳಿಗೆ ಚಿಕಿತ್ಸೆಯನ್ನು ನೀಡುತ್ತಿರುತ್ತವೆ. ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಸಾಯುವ ಪರಿಸ್ಥಿತಿ ಉದ್ಭವಾಗಿದೆ ಎಂದು ಸುರೇಶ್ ಉಲ್ಲೇಖಿಸಿದ್ದಾರೆ.

ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ

ರೆಮ್ಡೆಸಿವಿರ್​ ಚುಚ್ಚುಮದ್ದನ್ನು ಸರ್ಕಾರವು ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ 1000 ಕೋವಿಡ್ ರೋಗಿಗಳಿಗೆ ನೀಡುತ್ತಿದ್ದು, ಹಾಗೆಯೇ ಖಾಸಗಿ ಆಸ್ಪತ್ರೆಗಳಿಗೆ ಕೇವಲ ಶೇ 30 ಮಾತ್ರ ರೆಮ್ಡೆಸಿವಿರ್​ ಚುಚ್ಚುಮದ್ದನ್ನು ಮಾತ್ರ ಸರಬರಾಜು ಮಾಡಲಾಗುತ್ತಿದೆ. ಸೋಂಕಿತರ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಈ ಚುಚ್ಚುಮದ್ದು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದು, ಸರಿಯಾದ ಸಮಯಕ್ಕೆ ಔಷಧ ಸರಬರಾಜಾಗದೇ ಬಡರೋಗಿಗಳು ಗಾಬರಿಯಿಂದ ಸಾಯುವ ಪರಿಸ್ಥಿತಿ ಉದ್ಭವಿಸಿದೆ ಎಂದು ಸುರೇಶ್ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್ ಮತ್ತು ರೆಮ್ಡೆಸಿವಿರ್​ ತೀವ್ರ ಕೊರತೆ ಇರುವುದು ಸ್ಪಷ್ಟ

ಈ ಬಗ್ಗೆ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಸರ್ಕಾರವು ಔಷಧಿಯ ನೀಡುವ ಬಗ್ಗೆ ನಿಯಂತ್ರಣ ಮಾಡುತ್ತಿರುವುದಾಗಿ ಹೇಳುತ್ತಿದ್ದು, ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಜೊತೆ ಚರ್ಚೆ ಮಾಡಿದಾಗ ರಾಜ್ಯದಲ್ಲಿ ಆಕ್ಸಿಜನ್ ಮತ್ತು ರೆಮ್ಡೆಸಿವಿರ್​​ ತೀವ್ರ ಕೊರತೆ ಇರುವುದು ಸ್ಪಷ್ಟವಾಗಿದೆ. ಸರ್ಕಾರದ ಬೇಜವಾಬ್ದಾರಿಯಿಂದ ಮತ್ತು ಸರಿಯಾದ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡದೇ ಇರುವುದರಿಂದ ಕೋವಿಡ್ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. ಸರ್ಕಾರದ ದಿನಕ್ಕೊಂದು ಆದೇಶ ಮತ್ತು ನಡವಳಿಕೆಗಳಿಗೆ ಜನ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ.

ದಯವಿಟ್ಟು ಈ ಬಗ್ಗೆ ತಕ್ಷಣ ಎಚ್ಚೆತ್ತು ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಿಗೆ ಅಗತ್ಯವಿರುವ ಪ್ರಮಾಣದ ರೆಮ್ಡೆಸಿವಿರ್​ ಚುಚ್ಚುಮದ್ದು ಹಾಗೂ ಆಕ್ಸಿಜನ್ ಪೂರೈಕೆಯನ್ನು ಮಾಡಿ ಭವಿಷ್ಯದಲ್ಲಿ ಉದ್ಭವಿಸಬಹುದಾದ ಸಾವು - ನೋವುಗಳನ್ನು ತಡೆದು, ಅಮೂಲ್ಯವಾದ ಮಾನವನ ಜೀವವನ್ನು ಕಾಪಾಡಲು ಬೇಕಾದ ಕ್ರಮಗಳನ್ನು ತುರ್ತಾಗಿ ತೆಗೆದುಕೊಳ್ಳಲು ತಮ್ಮನ್ನು ಕೋರುತ್ತೇನೆ ಎಂದು ಸುರೇಶ್ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.