ಬೆಂಗಳೂರು: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಲೀಗ್ನಲ್ಲಿ ಬುಧವಾರ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಕೆಕೆಆರ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ರಾಬಿನ್ ಉತ್ತಪ್ಪ ಮತ್ತೊಂದು ದಾಖಲೆಗೂ ಸಹಾ ಪಾತ್ರರಾಗಿದ್ದಾರೆ.
ಈ ಪಂದ್ಯದಲ್ಲಿ 67 ರನ್ಗಳಿಸಿದ ಉತ್ತಪ್ಪ ಐಪಿಎಲ್ರನಲ್ಲಿ ಅತಿ ಹೆಚ್ಚು ರನ್ಗಳಿಸಿದವರಲ್ಲಿ ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್(4217) ದಾಖಲೆ ಹಿಂದಿಕ್ಕುವ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.
ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸುರೇಶ್ ರೈನಾ 5000 ರನ್ಗಳಿಸಿ ಐಪಿಎಲ್‌ನಲ್ಲಿ ಈ ಮೈಲುಗಲ್ಲು ತಲುಪಿದ ಮೊದಲಿಗರಾಗಿದ್ದರು. ಇನ್ನು ಆರ್‌ಸಿಬಿ ನಾಯಕ ಕೊಹ್ಲಿ 4954 ರನ್ಗಳಿಸಿ 2ನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ನ ನಾಯಕ ರೋಹಿತ್ ಶರ್ಮಾ ಇದ್ದು 4331 ರನ್ಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇದೀಗ ರಾಬಿನ್ ಉತ್ತಪ್ಪ 4231 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಕೊಹ್ಲಿಗೆ ಬೇಕು 46 ರನ್:ಇಂದು ಮುಂಬೈ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ 46 ರನ್ಗಳಿಸಿದರೆ ಐಪಿಎಲ್‌ನಲ್ಲಿ 5000 ರನ್ ದಾಖಲೆ ತಲುಪಲಿದ್ದಾರೆ.