ಶಿವಮೊಗ್ಗ: ನಗರದಲ್ಲಿ ಮತ್ತೆ ನೆತ್ತರು ಹರಿದಿದ್ದು, ದುರ್ಷ್ಕಮಿಗಳು ಮಾರಕಾಸ್ತ್ರಗಳಿಂದ ಪ್ರವೀಣ್ ಅಲಿಯಾಸ್ ಕಬಾಬ್ ಪ್ರವೀಣ್ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಜಿಲ್ಲೆಯ ಸೋಮಿನಕೊಪ್ಪ ರಸ್ತೆಯ ಪುರಲೆ ವಾಸಿಯಾಗಿರುವ ಪ್ರವೀಣ್ ಅಲಿಯಾಸ್ ಕಬಾಬ್ ಪ್ರವೀಣ್ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಯಾದ ಪ್ರವೀಣ್, ಓಸಿ ಮಧು ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದು, ಈ ಪ್ರಕರಣದಲ್ಲಿ ಜಾಮೀನು ಪಡೆದು ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ತನ್ನ ತಂದೆಯ ಜೊತೆ ವಾಸವಾಗಿದ್ದ. ಕಳೆದ ಒಂದು ವಾರದ ಹಿಂದೆ ಶಿವಮೊಗ್ಗಕ್ಕೆ ಬಂದಿದ್ದನು. ಈ ವೇಳೆ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ.
ಮಧುವಿನ ಕಡೆಯವರೆ ಆಟೋ ಕಾಂಪ್ಲೆಕ್ಸ್ನಲ್ಲಿ ಪ್ರವೀಣ್ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈತನ ಮೇಲೆ ಹಲವು ಪ್ರಕರಣಗಳಿದ್ದವು. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.