ಸಕಲೇಶಪುರ: ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟದಲ್ಲಿದ್ದು, ಕೂಡಲೇ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಣೆ ಮಾಡಬೇಕೆಂದು ಅತಿಥಿ ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ ಒತ್ತಾಯಿಸಿದರು.
ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಉಪ ವಿಭಾಗಾಧಿಕಾರಿಗೆ ತಾಲೂಕು ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿಂದು ಲಾಕ್ಡೌನ್ನಿಂದ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ. ಸುಮಾರು ಒಂದು ವರ್ಷಕ್ಕೂ ಹೆಚ್ಚಿನ ಸಂಬಳ ಬಾಕಿಯಿದೆ. ಲಾಕ್ಡೌನ್ನಿಂದಾಗಿ ತರಗತಿಗಳು ನಡೆಯದಿರುವುದರಿಂದ ಕೆಲಸವಿಲ್ಲದಂತಾಗಿದೆ.
ಸರ್ಕಾರ ಕಾಯಂ ಉಪನ್ಯಾಸಕರಿಗೆ ಮಾತ್ರ ಸಂಬಳ ನೀಡುತ್ತಿದೆ. ಆದರೆ ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡುತ್ತಿಲ್ಲ. ಇದರಿಂದಾಗಿ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೆಲವು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಬಾಕಿ ವೇತನವನ್ನು ನೀಡಬೇಕು ಹಾಗೂ ಕಾಯಂ ಉಪನ್ಯಾಸಕರಿಗೆ ನೀಡುವಂತೆ ಅತಿಥಿ ಉಪನ್ಯಾಸಕರಿಗೆ ವೇತನ ನೀಡಬೇಕು ಹಾಗೂ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಉಪನ್ಯಾಸಕರ ಮನವಿ - Sakleshpur guest lecturers protest
ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಕಲೇಶಪುರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.