ಕಲಘಟಗಿ: ತಾಲೂಕಿನ ಕಾಡನಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಯಿತು.
ಗ್ರಾಮದ 46 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ನಲ್ಲಿ ದಾಖಲಿಸಲಾಗಿದೆ. ಸೋಂಕಿತನ ಮನೆಯ ಓಣಿಯನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದ್ದು, ಸೋಂಕಿತನ ಟ್ರಾವೆಲ್ ಹಿಸ್ಟರಿ ಬಿಡುಗಡೆ ಮಾಡಬೇಕಿದೆ.
ಗ್ರಾಮ ಪಂಚಾಯತ್ ಸಿಬ್ಬಂದಿ ಗ್ರಾಮದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಕೊರೊನಾ ಪತ್ತೆ: ಕಾಡನಕೊಪ್ಪ ಗ್ರಾಮ ಸ್ಯಾನಿಟೈಸ್ - ಧಾರವಾಡ ಕೊರೊನಾ ವೈರಸ್ ಪ್ರಕರಣಗಳು
ಕಾಡನಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಗ್ರಾಮದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಯಿತು.