ಮಂಗಳೂರು: ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ರಚನೆ ಮಾಡಿರುವ ಸಂವಿಧಾನವನ್ನು ರಕ್ಷಣೆ ಮಾಡಬೇಕಾದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಸೋಲಿಸುವುದು ದ.ಕ.ಜಿಲ್ಲೆಯ ಎಲ್ಲಾ ದಲಿತರ ಗುರಿಯಾಗಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ಶೇಖರ್ ಕುಕ್ಕೇಡಿ ಕರೆ ನೀಡಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕುವರೆ ವರ್ಷಗಳ ಕಾಲ ಈ ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಬದುಕು ಬಹಳ ದುಸ್ತರವಾಗಿದೆ. ಈ ದೇಶದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶ ಮಾಡುವುದೇ ಬಿಜೆಪಿಯವರ ಅಜೆಂಡವಾಗಿದೆ. ಅಲ್ಲದೆ ಮನುಸ್ಮೃತಿ ಯನ್ನು ಈ ದೇಶದ ಸಂವಿಧಾನವಾಗಿಸುವುದೇ ಅವರ ಮೂಲ ಉದ್ದೇಶ ಎಂದು ಅವರು ಹೇಳಿದರು.
ಈ ಸಂದರ್ಭ ದ.ಕ.ಜಿಲ್ಲಾ ಕಾಂಗ್ರೆಸ್‌ನ ಕಾರ್ಯದರ್ಶಿ ಪ್ರೇಮನಾಥ ಬಳ್ಳಾಲ್ ಬಾಗ್, ಪರಿಶಿಷ್ಟ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್, ಕಾರ್ಪೊರೇಟರ್ ನಾಗವೇಣಿ ಮತ್ತಿತರರು ಉಪಸ್ಥಿತರಿದ್ದರು.