ETV Bharat / briefs

ಪುಲ್ವಾಮಾದಲ್ಲಿ ಎನ್​ಕೌಂಟರ್​​... ಇಬ್ಬರು ಉಗ್ರರನ್ನು ಸದೆಬಡಿದ ಸೈನಿಕರು - ಯೋಧ

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಪುಲ್ವಾಮಾ ಜಿಲ್ಲೆಯಲ್ಲಿ ಇಂಟರ್​ನೆಟ್​ ಸಂಪರ್ಕ ಸ್ಥಗಿತಗೊಳಿಸಿ, ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಭಾರತೀಯ ಸೇನೆಯ ಕಾರ್ಯಾಚರಣೆ
author img

By

Published : May 16, 2019, 8:40 AM IST

ಪುಲ್ವಾಮಾ: ದಕ್ಷಿಣ ಕಾಶ್ಮೀರದಲ್ಲಿಯ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಸೈನಿಕರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆ ಯೋಧರು ಉಗ್ರರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದು, ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.

ಭಾರತೀಯ ಸೇನೆಯ ಕಾರ್ಯಾಚರಣೆ

ಪ್ರಸ್ತುತ ಸ್ಥಳವನ್ನು ಸೇನೆ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್​​ನೆಟ್​ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸದ್ಯ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Intro:Body:

ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಭಯೋತ್ಪಾದಕರು ಹಾಗೂ ಸೇನೆಯ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿ ಓರ್ವ ಯೋಧ ಹುತಾತ್ಮರಾದ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.

ಗುರುವಾರ ಮುಂಜಾನೆ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಇಳಿದಿತ್ತು. ಇದರಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ. ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಪ್ರಸ್ತುತ ಸ್ಥಳವನ್ನು ಸೇನೆ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್​​ನೆಟ್​ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸದ್ಯ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.