ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಟಿಬೆಟಿಯನ್ ಕ್ಯಾಂಪ್ಗೆ ಚೀನಾದಿಂದ ಬರುವ ವ್ಯಕ್ತಿಗಳಿದ್ದಾರೆ. ಅವರಿಂದ ಕೊರೊನಾ ವೈರಸ್ ಹರಡುತ್ತಿದೆ ಎಂಬ ಸುಳ್ಳು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಎಚ್ಚರಿಸಿದ್ದಾರೆ.
ಬೈಲಕುಪ್ಪೆಯಲ್ಲಿ ಟಿಬೆಟಿಯನ್ ನೆಲೆಸಿ ವರ್ಷಗಳೇ ಕಳೆದಿವೆ. ಅವರೊಂದಿಗೆ ಸಂವಹಿಸಿದರೆ ಕೊರೊನಾ ವೈರಸ್ ಹರಡುತ್ತದೆ ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದರು.
ನಂಜನಗೂಡು ದೊಡ್ಡಜಾತ್ರೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮಾಹಿತಿ ನೀಡಲಿದ್ದಾರೆ ಎಂದರು.