ETV Bharat / briefs

ಕಾಂಗ್ರೆಸ್​ಗೆ ಬಿಗ್​ ಶಾಕ್​: ಬಿಜೆಪಿ ಸೇರಿದ ರಾಹುಲ್​ ಆಪ್ತ ಜಿತಿನ್​ ಪ್ರಸಾದ್​

author img

By

Published : Jun 9, 2021, 2:58 PM IST

Updated : Jun 9, 2021, 4:54 PM IST

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ಗೆ ಬಿಗ್​ ಶಾಕ್​ ನೀಡಿದ್ದಾರೆ.

ಜಿತಿನ್ ಪ್ರಸಾದ್​
ಜಿತಿನ್ ಪ್ರಸಾದ್​

ನವದೆಹಲಿ: ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕ, ರಾಹುಲ್ ಗಾಂಧಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್​ಗೆ ಬಿಗ್​ ಶಾಕ್​ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಜಿತಿನ್ ಪ್ರಸಾದ್ ಸೇರ್ಪಡೆ ಕೇಸರಿ ಪಕ್ಷಕ್ಕೆ ಬಲ ಬಂದಂತಾಗಿದೆ. ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಬಿಜೆಪಿ ಮುಖ್ಯ ವಕ್ತಾರ ಅನಿಲ್ ಬಲುನಿ ಸಮ್ಮುಖದಲ್ಲಿ ಜಿತಿನ್ ಪ್ರಸಾದ್ ದೆಹಲಿಯಲ್ಲಿಂದು ಕೇಸರಿ ಪಕ್ಷಕ್ಕೆ ಸೇರಿದರು.

'ಕಮಲ' ಹಿಡಿದ ಬಳಿಕ ಜಿತಿನ್​ ಹೇಳಿದ್ದೇನು?

ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಇಂದು ಯಾವುದಾದರೂ ರಾಷ್ಟ್ರೀಯ ಪಕ್ಷ ದೇಶದಲ್ಲಿದ್ದರೆ ಅದು ಬಿಜೆಪಿ ಮಾತ್ರ, ಉಳಿದ ಪಕ್ಷಗಳೆಲ್ಲಾ ಕೆಲವು ಜನರಿಗೆ ಅಥವಾ ಪ್ರದೇಶಕ್ಕೆ ಸೀಮಿತವಾಗಿವೆ. ಇಷ್ಟು ವರ್ಷಗಳ ಕಾಲ ನನಗೆ ರಾಜಕೀಯದಲ್ಲಿ ಕೆಲಸ ಮಾಡಿ, ನಾಯಕನಾಗಿ ಬೆಳೆಯಲು ಸಹಕರಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲ ಇನ್ನು ಮುಂದೆ ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ದುಡಿಯುತ್ತೇನೆ. ಜನರಿಗೆ ಸಹಾಯ ಮಾಡಬೇಕೆಂದರೆ, ಕೆಲಸ ಮಾಡಬೇಕೆಂದರೆ ಬಿಜೆಪಿಯೇ ಸರಿಯಾದ ಪಕ್ಷ ಎಂಬುದು ನನಗೆ ಮನವರಿಕೆಯಾಗಿದೆ ಎಂದರು. ಜಿತಿನ್ ಪ್ರಸಾದ್ ಕೇಂದ್ರದಲ್ಲಿ ಸಚಿವರಾಗಿ ದುಡಿದವರು. ಉತ್ತರ ಪ್ರದೇಶದ ಬ್ರಾಹ್ಮಣ ಸಮುದಾಯದಿಂದ ಬಂದ ಇವರು, ಈ ಹಿಂದೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು.

ಅಷ್ಟೇ ಅಲ್ಲದೆ ಉತ್ತರ ಪ್ರದೇಶದಲ್ಲಿ ಲೋಕಸಭಾ ಸ್ಥಾನಕ್ಕೆ ಎರಡು ಬಾರಿ ಸ್ಪರ್ಧಿಸಿ ಜಿತಿನ್ ಪ್ರಸಾದ್ ಸೋಲು ಕಂಡಿದ್ದರು. 2019ರ ಲೋಕಸಭಾ ಚುನಾವಣೆ ಸಮಯದಲ್ಲಿಯೇ ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳಿದ್ದವು. ಆಗ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಪಕ್ಷ ಬಿಟ್ಟು ಹೋಗದಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು.

Last Updated : Jun 9, 2021, 4:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.