ಕೊಲಂಬೋ(ಶ್ರೀಲಂಕಾ): ಸರಣಿ ಬಾಂಬ್ ಸ್ಫೋಟಕ್ಕೆ ಇಡೀ ದೇಶವೇ ತಲ್ಲಣಗೊಂಡ ಬಳಿಕ ಶ್ರೀಲಂಕಾ ಸರ್ಕಾರ, ಜನರು ಆತಂಕಕ್ಕೊಳಗಾಗುವುದನ್ನು ತಪ್ಪಿಸಲು ಫೇಸ್ ಬುಕ್, ಟ್ವಿಟರ್ ಮುಂತಾದ ಸೋಶಿಯಲ್ ಮೀಡಿಯಾಗಳನ್ನು ಬಳಸದಂತೆ ಕಠಿಣ ಕ್ರಮ ಕೈಗೊಂಡಿತ್ತು. ಇದೀಗ ದೇಶದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಸರ್ಕಾರ ನಿರ್ಬಂಧ ತೆರವುಗೊಳಿಸಿದ್ದಾರೆ. ಹಾಗಾಗಿ, ಜನರು ವಾಟ್ಸಪ್, ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಜನಪ್ರಿಯ ಜಾಲತಾಣಗಳನ್ನು ಬಳಸಬಹುದಾಗಿದೆ.
ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಿ ಎಂದು ಇದೇ ವೇಳೆ ಅಧ್ಯಕ್ಷ ಮೈತ್ರಿಪಾಲ ಜನರಿಗೆ ಮನವಿ ಮಾಡಿದ್ದಾರೆ.
ಏಪ್ರಿಲ್ 21 ರಂದು ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರಗಳೂ ಸೇರಿದಂತೆ ಪಂಚತಾರಾ ಹೊಟೇಲುಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿತ್ತು. ಘಟನೆಯಲ್ಲಿ 253 ಕ್ಕೂ ಹೆಚ್ಚು ಜನರು ಮೃತಪಟ್ಟು 400 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.