ಯಾದಗಿರಿ: ಜೂ.25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಜಿಲ್ಲೆಯ ರಾಮಸಮುದ್ರ ಹಾಗೂ ಕಂದಕೂರು ಸರ್ಕಾರಿ ಪ್ರೌಢ ಶಾಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.
ಶಾಲೆಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಬೇಕು. ಶಾಲಾ ಕೋಣೆ ಮತ್ತು ಆವರಣವನ್ನು ಸ್ವಚ್ಚಗೊಳಿಸಬೇಕು. ಡೆಸ್ಕ್ ಗಳ ಸುವ್ಯವಸ್ಥೆ ಹಾಗೂ ಡೆಸ್ಕ್ ಗಳನ್ನು ಹಾಕುವಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಪರೀಕ್ಷೆ ಬರೆಯಲು ಬಂದಂತಹ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡುವಂತೆ ತಿಳಿಸಿದರು.
ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಲ್ಲದೇ ಅರಕೇರಾ ಆರ್.ಎಂ.ಎಸ್.ಎ ಹಾಗೂ ಗುಂಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ತಾಲೂಕು ವೈದ್ಯಾಧಿಕಾರಿ ಡಾ.ಹನುಮಂತರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.