ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ಆರಂಭವಾಗಿದೆ.
ವಿಧಾನಸೌಧದ 3ನೇ ಮಹಡಿ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಲವು ಮಹತ್ವದ ನಿರ್ಣಯಗಳ ಕುರಿತು ಚರ್ಚೆ ನಡೆಯುತ್ತಿದೆ.
ಅತ್ಯಂತ ಪ್ರಮುಖವಾಗಿ ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರಿಗೆ ಕ್ವಾರಂಟೈನ್ ಮಾಡುವ ಇಲ್ಲವೇ ಕೈಬಿಡುವ ವಿಚಾರದ ಕುರಿತು, ಶಾಲೆಗಳ ಆರಂಭ, ಕೆಲ ವಿಧೇಯಕಗಳಿಗೆ ಅನುಮೋದನೆ ಪಡೆಯುವ ಹಾಗೂ ಐದು ರಾಜ್ಯಗಳಿಗೆ ನಿಲ್ಲಿಸಿರುವ ವಿಮಾನ ಸೇವೆ ಆರಂಭಿಸುವ, ಕೊರೊನಾ ಸೋಂಕಿತರ ಕ್ವಾರಂಟೈನ್
ಅವಧಿ ಸಡಿಲಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಇದಲ್ಲದೆ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ನೇಮಿಸುವ ಹಾಗೂ ನೇಕಾರರಿಂದ ನೇರವಾಗಿ ಬಟ್ಟೆ ಖರೀದಿಸುವ ಕುರಿತು ಹಾಗೂ ಸಾವಿರ ಮುನ್ನೂರಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಕೂಡ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.