ನವದೆಹಲಿ: ಕೊರೊನಾ ಎರಡನೇ ಅಲೆ ಮತ್ತು ಸ್ಥಳೀಯ ಲಾಕ್‌ಡೌನ್‌ಗಳ ಕಾರಣಕ್ಕೆ ವಲಸಿಗರ ಮರಳುವಿಕೆ ಆರಂಭವಾಗಿದೆ. ಈ ಹಿನ್ನೆಲೆ ಅನೇಕ ರಾಜ್ಯಗಳು ಎಲ್ಲಾ ಪಡಿತರ ಕಾರ್ಡ್ದಾರರಿಗೆ ಉಚಿತ ಆಹಾರ ಧಾನ್ಯಗಳನ್ನು ಬಿಡುಗಡೆ ಮಾಡಲು ಪರಿಗಣಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿಕೊಂಡಿವೆ.
ಹಿಂದಿನ ವರ್ಷ ರಾಷ್ಟ್ರವ್ಯಾಪಿ ಲಾಕ್‌ಡೌನ್ ಹೇರಿದ ನಂತರ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎ) ಅಡಿಯಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು. ಆದರೆ ಈ ಬಾರಿ ಸರ್ಕಾರ ಈ ಯೋಜನೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎನ್ನಲಾಗಿದೆ.
ಈ ಕುರಿತು ಮಾತನಾಡಿದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ, ಈ ಯೋಜನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ ಎಂದಿದ್ದಾರೆ.
ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿ ಧಾನ್ಯವನ್ನು ಕಡಿಮೆ ದರದಲ್ಲಿ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತದೆ. ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ, ಧಾನ್ಯಗಳನ್ನು ಕಡಿಮೆ ದರದಲ್ಲಿ ನೀಡಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಕನಿಷ್ಠ 80 ದಶಲಕ್ಷ ಜನರಿಗೆ ಅಕ್ಕಿ, ಗೋಧಿ, ಧಾನ್ಯಗಳನ್ನು ಕ್ರಮವಾಗಿ ಪ್ರತಿ ಕೆ.ಜಿ.ಗೆ ಕ್ರಮವಾಗಿ 3, 2, 1 ರೂ.ಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರ ಈ ಬಾರಿ ಉಚಿತ ಪಡಿತರವನ್ನು ಯಾವಾಗ ನೀಡುತ್ತದೆ ಎಂದು ಇನ್ನೂ ದೃಢಪಡಿಸಿಲ್ಲ. ಆದರೆ, ಈ ಬಗ್ಗೆ ಇದರ ಬಗೆಗಿನ ಆಲೋಚನೆ ಬಹಳ ಉದಾರವಾಗಿದ್ದು, ಮತ್ತು ಸಕಾರಾತ್ಮಕವಾಗಿದೆ ಎಂದು ಪಾಂಡೆ ಹೇಳಿದರು.