ETV Bharat / briefs

ನೀಟ್ ಪರೀಕ್ಷಾ ಪದ್ಧತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ? - ಕರ್ನಾಟಕ

ನೀಟ್ ಪದ್ಧತಿ ಜಾರಿಗೆ ಬಂದ ನಂತರ ಕರ್ನಾಟಕದ 100 ರಿಂದ 120 ಮಂದಿ ಮಾತ್ರ ವೈದ್ಯಕೀಯ ಕೋರ್ಸುಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಹೀಗಾಗಿ ಇದು ರಾಜ್ಯದ ವಿದ್ಯಾರ್ಥಿಗಳಿಗೆ ಶಾಕಿಂಗ್​ ವಿಷಯವಾಗಿದೆ. ರಾಜ್ಯದಲ್ಲಿ ಸಿಇಟಿ ಪದ್ಧತಿ ಇದ್ದಾಗ ಪ್ರತಿ ವರ್ಷ 2000ಕ್ಕೂ ವಿದ್ಯಾರ್ಥಿಗಳು ಮೆಡಿಕಲ್​ ಸೀಟ್​ ಪಡೆಯುತ್ತಿದ್ದರು. ಆದರೆ ಈ ಸಂಖ್ಯೆ ನೀಟ್​ನಿಂದ ಭಾರಿ ಕುಸಿತ ಕಂಡಿದೆ.

ನೀಟ್
author img

By

Published : May 7, 2019, 4:35 PM IST

ಬೆಂಗಳೂರು: ವೈದ್ಯಕೀಯ ಸೀಟುಗಳ ಹಂಚಿಕೆಗಾಗಿ ನಡೆಯುವ ನೀಟ್ ಪರೀಕ್ಷೆಯ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇದೀಗ ಪ್ರತಿವರ್ಷ ಶೇ. 5ರಷ್ಟು ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಕೋರ್ಸುಗಳಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಇತ್ತೀಚಿನವರೆಗೂ ರಾಜ್ಯ ಸರ್ಕಾರವೇ ನಡೆಸುತ್ತಿದ್ದ ಸಿಇಟಿ ಪರೀಕ್ಷೆಗಳ ಮೂಲಕ ಕನಿಷ್ಠ ಪಕ್ಷ ರಾಜ್ಯದ 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು. ಆದರೆ ನೀಟ್ ಪದ್ಧತಿ ಜಾರಿಗೆ ಬಂದ ನಂತರ ಕರ್ನಾಟಕದಿಂದ 100 ರಿಂದ 120 ಮಂದಿ ಮಾತ್ರ ವೈದ್ಯಕೀಯ ಕೋರ್ಸುಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ.

ಸಿಇಟಿ ವ್ಯವಸ್ಥೆ ಜಾರಿಯಲ್ಲಿದ್ದಾಗ ಸರ್ಕಾರ ಹಾಗೂ ಖಾಸಗಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಆಡಳಿತ ಮಂಡಳಿಯ ನಡುವೆ ಪರಸ್ಪರ ಮಾತುಕತೆಯ ಮೂಲಕ ಶೇಕಡಾವಾರು ಸೀಟು ಹಂಚಿಕೆಯಾಗುತ್ತಿತ್ತು. ಈ ಪೈಕಿ ಶೇ. 55 ಇಲ್ಲವೇ 60 ರಷ್ಟು ಸೀಟುಗಳು ಸಿಇಟಿ ಪರೀಕ್ಷೆ ಬರೆದವರಿಗೆ ಲಭ್ಯವಾಗುತ್ತಿದ್ದವು. ಶೇ. 40 ರಿಂದ 45 ರಷ್ಟು ಸೀಟುಗಳು ಆಡಳಿತ ಮಂಡಳಿಗೆ ಸಿಗುತ್ತಿದ್ದವು.

ಇದರಿಂದ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ 2800 ಸೀಟು ಲಭ್ಯವಾಗುತ್ತಿದ್ದವು. ಕಡಿಮೆ ಪ್ರಮಾಣದ ಸೀಟುಗಳು ಆಡಳಿತ ಮಂಡಳಿಗಳಿಗೆ ದಕ್ಕುತ್ತಿದ್ದವು. ಹೀಗೆ ತಮಗೆ ದಕ್ಕಿದ ಸೀಟುಗಳನ್ನು ಮ್ಯಾನೇಜ್​ಮೆಂಟ್ ಕೋಟಾದಡಿ ಮತ್ತು ಅನಿವಾಸಿ ಭಾರತೀಯರ ಕೋಟಾದಡಿ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಬೇರೆ ರಾಜ್ಯದ ಅಥವಾ ಬೇರೆ ದೇಶದ ವಿದ್ಯಾರ್ಥಿಗಳಿಗೆ ಒದಗಿಸುತ್ತಿದ್ದರು. ಇಷ್ಟಾದರೂ ಸಿಇಟಿ ಪರೀಕ್ಷೆ ಬರೆದ ರಾಜ್ಯದ ವಿದ್ಯಾರ್ಥಿಗಳು ಗಣನೀಯ ಪ್ರಮಾಣದ ಸೀಟುಗಳನ್ನು ಪಡೆಯುತ್ತಿದ್ದರು.

ಆದರೆ ನೀಟ್ ವ್ಯವಸ್ಥೆ ಜಾರಿಗೆ ಬಂದ ನಂತರ ರಾಜ್ಯದ ವಿದ್ಯಾರ್ಥಿಗಳಿಗೆ ಲಭ್ಯವಾಗುವ ಸೀಟುಗಳ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಹಲವು ಕಾರಣಗಳಿದ್ದು, ಬಹುತೇಕರಿಗೆ ರಾಜ್ಯದಿಂದ ಹೊರ ಭಾಗದಲ್ಲಿ ಸೀಟುಗಳು ಸಿಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೊರರಾಜ್ಯಗಳಿಗೆ ಹೋಗಲು ಇಷ್ಟಪಡುತ್ತಿಲ್ಲ.

ದೂರದ ಪಂಜಾಬ್​​, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‍ಘಡ್‍ನಂತಹ ರಾಜ್ಯಗಳಿಗೆ ಹೋಗಲು ಕರ್ನಾಟಕದ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಹೊರರಾಜ್ಯಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ದಕ್ಕುವ 250ರಿಂದ 300ರಷ್ಟು ಸೀಟುಗಳ ಪೈಕಿ 50 ರಿಂದ 60 ರಷ್ಟು ಸೀಟುಗಳು ಮಾತ್ರ ಭರ್ತಿಯಾಗುತ್ತವೆ.

ಇನ್ನು ಕರ್ನಾಟಕದಲ್ಲಿ ಲಭ್ಯವಾಗುವ ಸೀಟುಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿರುವುದರಿಂದ ಒಟ್ಟಾರೆಯಾಗಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಶೇ. 5 ಕ್ಕೆ ಕುಸಿದಿದೆಯಂತೆ.

ರಾಜ್ಯದಲ್ಲಿ ಈವರೆಗೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಹೆಚ್ಚು ಸೀಟು ದಕ್ಕುತ್ತಿದ್ದರಿಂದ ವೈದ್ಯಕೀಯ ಶಿಕ್ಷಣಕ್ಕೆ ಸೇರಿಕೊಳ್ಳುತ್ತಿದ್ದರು. ಆದರೆ ಈಗ ಬದಲಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದೇ ಕಡಿಮೆಯಾಗಿದ್ದು ಒಂದು ಬಗೆಯ ಆತಂಕ ಸೃಷ್ಟಿಯಾಗಿದೆ.

ಈ ಹಿನ್ನೆಲೆಯಲ್ಲಿ ಯಾವ ಪರಿಹಾರೋಪಾಯಗಳನ್ನು ಕಂಡು ಹಿಡಿಯಬೇಕು ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ತಲೆನೋವು ಶುರುವಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಕೇಂದ್ರದ ಮೊರೆ ಹೋಗಿ, ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Intro:ಬೆಂಗಳೂರು : ವೈದ್ಯಕೀಯ ಸೀಟುಗಳ ಹಂಚಿಕೆಗಾಗಿ ನಡೆಯುವ ನೀಟ್ ಪರೀಕ್ಷೆಯ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಇದೀಗ ಪ್ರತಿವರ್ಷ ಶೇ. 5 ರಷ್ಟು ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಕೋರ್ಸುಗಳಿಗೆ ಸೇರ್ಪಡೆಯಾಗುತ್ತಿದ್ದಾರೆ.Body:ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಇತ್ತೀಚಿನವರೆಗೂ ರಾಜ್ಯ ಸರ್ಕಾರವೇ ನಡೆಸುತ್ತಿದ್ದ ಸಿಇಟಿ ಪರೀಕ್ಷೆಗಳ ಮೂಲಕ ಕನಿಷ್ಠ ಪಕ್ಷ ರಾಜ್ಯದ 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು. ಆದರೆ ನೀಟ್ ಪದ್ಧತಿ ಜಾರಿಗೆ ಬಂದ ನಂತರ ಕರ್ನಾಟಕದ 100 ರಿಂದ 120 ಮಂದಿ ಮಾತ್ರ ವೈದ್ಯಕೀಯ ಕೋರ್ಸುಗಳಲ್ಲಿ ಪ್ರವೇಶ ಪಡೆಯುತ್ತಿದ್ದು, ಇದರ ಪರಿಣಾಮವಾಗಿ ಕರ್ನಾಟಕಕ್ಕೆ ಮೇಜರ್ ಶಾಕ್ ಆದಂತಾಗಿದೆ.

ಸಿಇಟಿ ವ್ಯವಸ್ಥೆ ಜಾರಿಯಲ್ಲಿದ್ದಾಗ ಸರ್ಕಾರ ಹಾಗೂ ಖಾಸಗಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಆಡಳಿತ ಮಂಡಳಿಯ ನಡುವೆ ಪರಸ್ಪರ ಮಾತುಕತೆಯ ಮೂಲಕ ಶೇಕಡಾವಾರು ಸೀಟು ಹಂಚಿಕೆಯಾಗುತ್ತಿತ್ತು. ಈ ಪೈಕಿ ಶೇ. 55 ಇಲ್ಲವೇ 60 ರಷ್ಟು ಸೀಟುಗಳು ಸಿಇಟಿ ಪರೀಕ್ಷೆ ಬರೆದವರಿಗೆ ಲಭ್ಯವಾಗುತ್ತಿತ್ತಾದರೆ ಶೇ. 40 ರಿಂದ 45 ರಷ್ಟು ಸೀಟುಗಳು ಆಡಳಿತ ಮಂಡಳಿಗೆ ಸಿಗುತ್ತಿದ್ದವು. ಇದರಿಂದ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ 2800 ಸೀಟು ಲಭ್ಯವಾಗುತ್ತಿತ್ತಾದರೆ ಇದಕ್ಕೂ ಸ್ವಲ್ಪ ಕಡಿಮೆ ಪ್ರಮಾಣದ ಸೀಟುಗಳು ಆಡಳಿತ ಮಂಡಳಿಗಳಿಗೆ ದಕ್ಕುತ್ತಿದ್ದವು. ಹೀಗೆ ತಮಗೆ ದಕ್ಕಿದ ಸೀಟುಗಳನ್ನು ಮ್ಯಾನೇಜ್ ಮೆಂಟ್ ಕೋಟಾದಡಿ ಮತ್ತು ಅನಿವಾಸಿ ಭಾರತೀಯರ ಕೋಟಾದಡಿ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಬೇರೆ ರಾಜ್ಯದ ಅಥವಾ ಬೇರೆ ದೇಶದ ವಿದ್ಯಾರ್ಥಿಗಳಿಗೆ ಒದಗಿಸುತ್ತಿದ್ದರು. ಇಷ್ಟಾದರೂ ಸಿಇಟಿ ಪರೀಕ್ಷೆ ಬರೆದ ರಾಜ್ಯದ ವಿದ್ಯಾರ್ಥಿಗಳು ಗಣನೀಯ ಪ್ರಮಾಣದ ಸೀಟುಗಳನ್ನು ಪಡೆಯುತ್ತಿದ್ದರು.ಆದರೆ ನೀಟ್ ವ್ಯವಸ್ಥೆ ಜಾರಿಗೆ ಬಂದ ನಂತರ ರಾಜ್ಯದ ವಿದ್ಯಾರ್ಥಿಗಳಿಗೆ ಲಭ್ಯವಾಗುವ ಸೀಟುಗಳ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿದಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಹಲವು ಕಾರಣಗಳಿದ್ದು, ಬಹುತೇಕರಿಗೆ ರಾಜ್ಯದಿಂದ ಹೊರ ಭಾಗದಲ್ಲಿ ಸೀಟುಗಳು ಸಿಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೊರರಾಜ್ಯಗಳಿಗೆ ಹೋಗಲು ಇಷ್ಟಪಡುತ್ತಿಲ್ಲ.

ದೂರದ ಪಂಜಾಬ್‍ಗೋ, ರಾಜಸ್ತಾನ, ಮಧ್ಯಪ್ರದೇಶ, ಒರಿಸ್ಸಾ, ಛತ್ತೀಸ್‍ಘಡ್‍ನಂತಹ ರಾಜ್ಯಗಳಿಗೋ ಹೋಗಲು ರಾಜ್ಯದ ವಿದ್ಯಾರ್ಥಿಗಳು ಆಸಕ್ತಿ ವ್ಯಕ್ತಪಡಿಸುತ್ತಿಲ್ಲ. ಹೀಗಾಗಿ ಹೊರರಾಜ್ಯಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ದಕ್ಕುವ 250 ರಿಂದ 300 ರಷ್ಟು ಸೀಟುಗಳ ಪೈಕಿ 50 ರಿಂದ 60 ರಷ್ಟು ಸೀಟುಗಳು ಮಾತ್ರ ಭರ್ತಿಯಾಗುತ್ತವೆ.

ಇನ್ನು ಕರ್ನಾಟಕದಲ್ಲಿ ಲಭ್ಯವಾಗುವ ಸೀಟುಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿರುವುದರಿಂದ ಒಟ್ಟಾರೆಯಾಗಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಶೇ. 5 ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇದುವರೆಗೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ 2800 ಸೀಟು ದಕ್ಕುತ್ತಿತ್ತು. ಹೀಗಾಗಿ ವಿದ್ಯಾರ್ಥಿಗಳು ನಿರಾತಂಕವಾಗಿ ಸೀಟು ಪಡೆಯಬಹುದಿತ್ತು. ಆದರೆ ಈಗ ಬದಲಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದೇ ಕಡಿಮೆಯಾಗಿದ್ದು ಒಂದು ಬಗೆಯ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಯಾವ ಪರಿಹಾರೋಪಾಯಗಳನ್ನು ಕಂಡು ಹಿಡಿಯಬೇಕು ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ತಲೆನೋವು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಕೇಂದ್ರದ ಮೊರೆ ಹೋಗಿ, ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.