ನವದೆಹಲಿ: ರಫೇಲ್ ಡೀಲ್ನ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ಇಂದು ತನ್ನ ಮಹತ್ವದ ತೀರ್ಪು ನೀಡಲಿದೆ.
ರಫೇಲ್ ಡೀಲ್ನಲ್ಲಿ ಅವ್ಯವಹಾರ ನಡೆದಿದೆ ಹಾಗೂ ಈ ಕುರಿತಂತೆ ಸೂಕ್ತ ತನಿಖೆ ನಡೆಯಬೇಕು ಎಂದು ವಕೀಲ ಪ್ರಶಾಂತ್ ಭೂಷಣ್ ಹಾಗೂ ಕೆಲವರು ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ತಳ್ಳಿಹಾಕಿದ್ದ ಸುಪ್ರೀಂ ಕಳೆದ ಡಿಸೆಂಬರ್ನಲ್ಲಿ ಮೋದಿ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿತ್ತು.
ಫೆಬ್ರವರಿಯಲ್ಲಿ ಮಾಧ್ಯಮಗಳಲ್ಲಿ ಡೀಲ್ಗೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳು ಸೋರಿಕೆಯಾಗಿತ್ತು. ಇವೆಲ್ಲವನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿತ್ತು.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಏಪ್ರಿಲ್ 10ರಂದು ತನ್ನ ತೀರ್ಪು ನೀಡುವುದಾಗಿ ಮಾರ್ಚ್ 14ರಂದು ಪ್ರಕಟಿಸಿತ್ತು.