ETV Bharat / briefs

ಕೊರೊನಾ ವಾರಿಯರ್ಸ್​ಗೆ ರೋಗ ನಿರೋಧಕ ಮಾತ್ರೆ ವಿತರಣೆ

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯಿಂದ ಪತ್ರಕರ್ತರು ಹಾಗೂ ಇತರೆ ಇಲಾಖೆಗಳ ಕೊರೊನಾ ವಾರಿಯರ್ಸ್‌ಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ವಿತರಿಸಲಾಯಿತು.

Surapura
Surapura
author img

By

Published : Jun 4, 2020, 6:38 PM IST

ಸುರಪುರ(ಯಾದಗಿರಿ): ಇಂದು ಪತ್ರಕರ್ತರು ಹಾಗೂ ವಿವಿಧ ಇಲಾಖೆಗಳ ಕೊರೊನಾ ವಾರಿಯರ್ಸ್​ಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ವಿತರಿಸಲಾಯಿತು.

ನಗರದ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ಆರೋಗ್ಯಾಧಿಕಾರಿಗಳು, ಪರ್ತಕರ್ತರು ಹಾಗೂ ವಿವಿಧ ಇಲಾಖೆಯವರಿಗೆ ಮಾತ್ರೆಗಳನ್ನು ವಿತರಿಸಿದರು.

ಬಳಿಕ ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ ಮಾತನಾಡಿ, ಆಯುಷ್ ಇಲಾಖೆ ವತಿಯಿಂದ ನೀಡುತ್ತಿರುವ ಔಷಧಿಗಳು ಮನುಷ್ಯನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತವೆ. ಇವು ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಎಲ್ಲಾ ಔಷಧಿಗಳು ವಿವಿಧ ರೂಪದಲ್ಲಿ ಮಾನವನ ದೇಹ ಸೇರುವುದರಿಂದ ಮನುಷ್ಯನ ಆರೋಗ್ಯ ವೃದ್ಧಿಸಲಿದೆ ಎಂದರು.

ವೈದ್ಯಾಧಿಕಾರಿ ಸಂಜಯ್ ಕುಲಕರ್ಣಿ ಮಾತನಾಡಿ, ಮನುಷ್ಯನ ದೇಹಕ್ಕೆ ಶುಂಠಿ, ಬೆಳ್ಳುಳ್ಳಿ, ಜೀರಿಗೆ ಜೊತೆಗೆ ಅಮೃತಬಳ್ಳಿ ಕಷಾಯ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.