ETV Bharat / briefs

ಬಸವಕಲ್ಯಾಣದಲ್ಲಿ ಇಂದು 10 ಕೊರೊನಾ ಕೇಸ್​​ ಪತ್ತೆ: ಬೀದರ್​ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 308ಕ್ಕೆ ಏರಿಕೆ - Bidar corona latest news

ಇಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲೇ ಹತ್ತು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ.

Bidar corona
Bidar corona
author img

By

Published : Jun 12, 2020, 8:48 PM IST

ಬೀದರ್: ಮಹಾರಾಷ್ಟ್ರದಿಂದ ವಾಪಸಾದವರಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬಸವಕಲ್ಯಾಣ ತಾಲೂಕಿನಲ್ಲೇ 10 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಘಾಟ ಹಿಪ್ಪರಗಾ ತಾಂಡದಲ್ಲೇ 9 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇವರೆಲ್ಲಾ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಬಸವಕಲ್ಯಾಣ ನಗರದ ವಡ್ಡರ ಗಲ್ಲಿಯಲ್ಲೂ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ತಾಲೂಕಿನಲ್ಲಿ ಒಟ್ಟು 10 ಪಾಸಿಟಿವ್ ಕೇಸ್ ದೃಢಪಟ್ಟಿವೆ.

ಜಿಲ್ಲೆಯಲ್ಲಿನ ಸೋಂಕಿತರ ಒಟ್ಟು ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಇಂದು 22 ಜನರು ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು 203 ಜನರು ಗುಣಮುಖರಾಗಿದ್ದು, 6 ಜನರು ಸಾವನ್ನಪ್ಪಿದ್ದಾರೆ. 99 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.