ಚಿತ್ರದುರ್ಗ: ಕೋಟೆನಾಡಿನಲ್ಲಿ ಮೂರು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
32 ವರ್ಷದ ಪಿ-6396, 41 ವರ್ಷದ ಪಿ-6397 ಹಾಗೂ 32 ವರ್ಷದ ಪಿ-6398 ಸೇರಿ ಮೂವರಿಗೆ ಸೋಂಕು ತಗುಲಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಮೂಲದ 27 ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಹಾಗೂ ಕೋಲಾರ ಜಿಲ್ಲೆಯ ಕೆಜಿಎಫ್ನಿಂದ ಜಿಲ್ಲೆಗೆ ಆಗಮಿಸಿದ್ದ ಪೊಲೀಸ್ ಕಾನ್ಸ್ಟೇಬಲ್ ಗೆ ಸೋಂಕು ದೃಢವಾಗಿದೆ.
ಜಿಲ್ಲೆಯಲ್ಲಿರುವ ಒಟ್ಟು 43 ಪ್ರಕರಣಗಳಲ್ಲಿ 39 ಜನ ಈಗಾಗಲೇ ಕೊರೊನಾದಿಂದ ಗುಣಮುಖರಾಗಿದ್ದು, ಓರ್ವ ಯುವತಿ ಉಡುಪಿಯ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.