ETV Bharat / briefs

ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಇಂದು ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖರಾಗಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

Bellary news
Bellary news
author img

By

Published : Jun 4, 2020, 4:31 PM IST

Updated : Jun 4, 2020, 5:00 PM IST

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರಿಗೆ ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಈ ಮೂವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್.ಬಸರೆಡ್ಡಿ ಹಾಗೂ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಆತ್ಮೀಯವಾಗಿ ಬಿಡುಗಡೆಗೊಳಿಸಿದ್ರು.

ಬಿಡುಗಡೆಗೊಂಡವರ ವಿವರ:

34 ವರ್ಷದ ಪುರುಷ (ಪಿ-2308)-ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

44 ವರ್ಷದ (ಪಿ-2781) ಮಥುರಾದಿಂದ ಬಳ್ಳಾರಿಗೆ ಪ್ರಯಾಣಿಸಿದ ಟ್ರಾವೆಲ್‌ ಹಿಸ್ಟರಿ ಇದೆ.

26 ವರ್ಷದ ಯುವತಿ (ಪಿ-2778) ಕುರಿಹಟ್ಟಿ ಮೂಲದವಳೆಂದು ತಿಳಿದು ಬಂದಿದೆ.

ಕೊರೊನಾದಿಂದ ಮೂವರು ಗುಣಮುಖ

ನಿನ್ನೆ ತಡರಾತ್ರಿ ಮತ್ತೊಂದು ಕೊರೊನಾ‌ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು 17 ಸಕ್ರಿಯ ಪ್ರಕರಣಗಳಿವೆ.

Last Updated : Jun 4, 2020, 5:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.