ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆ ಅಬ್ಬರ ಜೋರಾಗಿದೆ. ಟಿಎಂಸಿ ಮತ್ತು ಬಿಜೆಪಿ ನಾಯಕರ ಮಧ್ಯೆ ಭಾರಿ ವಾಕ್ಸಮರವೇ ಏರ್ಪಟ್ಟಿದೆ. ಚುನಾವಣಾ ಪ್ರಚಾರಕ್ಕೆ ಪಾಕ್ ಪ್ರಧಾನಿಯನ್ನೇ ಕರೆಯಿಸಲು ಟಿಎಂಸಿ ಪ್ಲಾನ್ ನಡೆಸುತ್ತಿದೆ ಬಿಜೆಪಿ ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಬಿಜೆಪಿ ಮುಖಂಡ ಮುಕುಲ್ ರಾಯ್, ಪಾಕ್ ಪ್ರಧಾನಿ ಇಮ್ರಾನ್ ಖಾನ್ರನ್ನ ಓರ್ವ ಮಾಜಿ ಕ್ರಿಕೆಟಿಗನಾಗಿ ಪಶ್ಚಿಮ ಬಂಗಾಳಕ್ಕೆ ಕರೆತಂದು ಟಿಎಂಸಿ ಚುನಾವಣೆ ರ‍್ಯಾಲಿ ನಡೆಸಲು ಪ್ಲಾನ್ ನಡೆಸುತ್ತಿದೆ ಎಂದು ಆಪಾದಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿರುವ ಅವರು, ಟಿಎಂಸಿ ಪರ ಇಬ್ಬರು ಬಾಂಗ್ಲಾದೇಶದ ತಾರೆಯಲು ಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 42 ಸಂಸದೀಯ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ.