ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮನವಿ ಮಾಡಿದ್ದಾರೆ.
ವಾರದ ಕೊನೆಯ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಕೊರೊನಾ ಸೋಂಕು ಹೆಚ್ಚಾಗಬಹುದು ಎಂಬ ಆತಂಕವನ್ನು ಇಲ್ಲಿನ ಜನತೆ ಜಿಲ್ಲಾಡಳಿತದ ಮುಂದೆ ವ್ಯಕ್ತಪಡಿಸಿದ್ದರು.
ಅಲ್ಲದೆ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಭೇಟಿ ನೀಡಿದ ಸಂದರ್ಭದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೆ ಇರುವುದು ಕೂಡ ಜಿಲ್ಲಾಡಳಿತ ಗಮನಿಸಿದ್ದು, ಕೋವಿಡ್ ಆತಂಕ ಕಡಿಮೆಯಾಗುವವರೆಗೂ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಸಲಹೆ ನೀಡಿದೆ.
ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಡಿಸಿ ಮನವಿ
ಕೋವಿಡ್ ಸೋಂಕು ಹತೋಟಿಗೆ ಬರುವವರೆಗೂ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮನವಿ ಮಾಡಿದ್ದಾರೆ.