ಕಲಬುರ್ಗಿ : ಯಾರ ಭಯವು ಇಲ್ಲದೇ ರಾಜಾರೋಷವಾಗಿ ಅಕ್ರಮ ನಾಡ ಪಿಸ್ತೂಲ್ ಇಟ್ಟುಕೊಂಡಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಫ್ಜಲಪುರ ತಾಲೂಕಿನ ಕೋಗನೂರು ನಿವಾಸಿಗಳಾದ ಹಸನಸಾಬ್ ಹತ್ತರಕಿ (33) ಹಾಗೂ ಲಕ್ಷ್ಮಿಕಾಂತ ಶೇಖಜಿ (40) ಬಂಧಿತರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ತಿಳಿಸಿದ್ದಾರೆ. ಬಂಧಿತರಿಂದ ಒಂದು ನಾಡ ಪಿಸ್ತೂಲ್, ಮೂರು ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಎಂಎಸ್ಕೆ ಮಿಲ್, ಕಣ್ಣಿ ಬಜಾರ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಅಶೋಕ ನಗರ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.