ಬಾಗಲಕೋಟೆ : ಹುಟ್ಟುಹಬ್ಬ ಆಚರಣೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಸಾರಿಗೆ ಸಂಸ್ಥೆಯ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಹಾಗೂ ಮಗು ಮೃತ ಪಟ್ಟಿರುವ ಘಟನೆ ಜಿಲ್ಲೆಯ ಶಿರೂರು ಗ್ರಾಮದಲ್ಲಿ ನಡೆದಿದೆ.
ಸಂಬಂಧಿಕರ ಹುಟ್ಟುಹಬ್ಬ ಆಚರಣೆ ಮಾಡಲು ಸಮೀಪದ ಕಮತಗಿ ಗ್ರಾಮಕ್ಕೆ ಬೈಕ್ನಲ್ಲಿ ಒಂದೇ ಕುಟುಂಬದ ನಾಲ್ವರಾದ ಸಿದ್ದಪ್ಪ ಚಿಲಕಿ(45), ಮಗು ಶೇಯಸ್ಸು(4), ಪತ್ನಿ ರೇಖಾ(38), ಶೃದ್ದಾ(3) ಎಂಬುವವರು ತರೆಳಿದ್ದರು. ಶಿರೂರು ಗ್ರಾಮಕ್ಕೆ ವಾಪಸಾಗುವ ವೇಳೆ ಬಾಗಲಕೋಟೆಯಿಂದ ಇಳಕಲ್ಲಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ವಾಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪ ಚಿಲಕಿ ಮತ್ತು ಶೇಯಸ್ಸು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿ ರೇಖಾ ಹಾಗೂ ಇನ್ನೊಂದು ಮಗು ಶೃದ್ದಾ ಗಂಭೀರ ಗಾಯಗೊಂಡಿದ್ದಾರೆ.
ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.