ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಸಾಗರ ತಾಲೂಕಿನ ಉಳ್ಳೂರು ಗ್ರಾಮದ ಬಳಿ ಘಟನೆ ನಡೆದಿದೆ. ಕಾರು ಶಿರಸಿಯಿಂದ ಬೆಂಗಳೂರಿಗೆ ಹೊರಟಿರುವ ಸಂದರ್ಭದಲ್ಲಿ ಉಳ್ಳೂರು ಕ್ರಾಸ್ ಬಳಿ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದ ಪರಿಣಾಮ ಹೆಚ್ಚಿನ ಅನಾಹುತ ನಡೆದಿಲ್ಲ.
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕನ ಕೈ ಮತ್ತು ಕಾಲುಗಳಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.