ETV Bharat / briefs

ಸೋಂಕಿನಿಂದ ಸಾವನ್ನಪ್ಪಿದ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಯುಪಿ ಸಿಎಂ ಘೋಷಣೆ

author img

By

Published : May 30, 2021, 6:17 PM IST

ಉತ್ತರ ಪ್ರದೇಶದಲ್ಲಿ ಕೋವಿಡ್ -19 ಸೋಂಕಿಗೆ ಬಲಿಯಾದ ಪತ್ರಕರ್ತರ ಸಂಬಂಧಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ಯೋಗಿ ಆದಿತ್ಯನಾಥ್​
ಯೋಗಿ ಆದಿತ್ಯನಾಥ್​

ಲಖನೌ (ಉತ್ತರ ಪ್ರದೇಶ): ಹಿಂದಿ ಪತ್ರಿಕೋದ್ಯಮ ದಿನಾಚರಣೆಯಂದು ಇಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೋವಿಡ್ -19 ಸೋಂಕಿಗೆ ಬಲಿಯಾದ ಪತ್ರಕರ್ತರ ಸಂಬಂಧಿಗಳಿಗೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಯುಪಿ ಮುಖ್ಯಮಂತ್ರಿ ಕಚೇರಿಯ ಮಾಹಿತಿ ಪ್ರಕಾರ, ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ರಾಜ್ಯ ಸರ್ಕಾರದ ಮಾಹಿತಿ ಇಲಾಖೆಯು ಮೃತ ಪತ್ರಕರ್ತರ ವಿವರಗಳನ್ನು ಸಂಗ್ರಹಿಸಿದೆ. ಅವರ ಕುಟುಂಬಗಳಿಗೆ ಆರ್ಥಿಕ ಸಹಾಯವನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ದೇಶಾದ್ಯಂತ 420 ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಹೇಳಿದೆ. ಐಎಂಎ ಪಟ್ಟಿಯ ಪ್ರಕಾರ, ಮೇ 22 ರವರೆಗೆ ಉತ್ತರ ಪ್ರದೇಶದಲ್ಲಿ 41 ವೈದ್ಯರು ಸಾವನ್ನಪ್ಪಿದ್ದಾರೆ.

ಕೊರೊನಾದಿಂದ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ರಾಜ್ಯದಲ್ಲಿ ಪ್ರಸ್ತುತ 46,201 ಸಕ್ರಿಯ ಪ್ರಕರಣಗಳಿದ್ದು, 20,208 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.