ETV Bharat / briefs

ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಪ್ರೊ. ವಸಂತ ಕುಷ್ಟಗಿ‌ ಅಂತ್ಯಕ್ರಿಯೆ

ಕಲಬುರಗಿ ತಹಶೀಲ್ದಾರ್​​ ಪ್ರಕಾಶ ಕುದರೆ ಅವರು ಜಿಲ್ಲಾಡಳಿತ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮೃತರ ಗೌರವಾರ್ಥ ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು..

author img

By

Published : Jun 4, 2021, 7:02 PM IST

  Vasantha kushtagi funeral with government honours

ಕಲಬುರಗಿ : ಹೃದ್ರೋಗ ಮತ್ತು ರಕ್ತದೊತ್ತಡ ಸಮಸ್ಯೆಯಿಂದ ಇಂದು ಬೆಳಗ್ಗೆ ನಿಧನರಾದ ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ‌ ಅವರ ಅಂತ್ಯಕ್ರಿಯೆ ಮಧ್ಯಾಹ್ನ 3.30 ಗಂಟೆ ಸುಮಾರಿಗೆ ನಗರದ ಸಂತ್ರಾಸವಾಡಿಯ ರುದ್ರಭೂಮಿಯಲ್ಲಿ ಪೊಲೀಸ್ ಗೌರವದೊಂದಿಗೆ ನಡೆಯಿತು.

ವಾರದ ಹಿಂದೆಯೇ ರಕ್ತದೊತ್ತಡ ಕಡಿಮೆ ಕಾರಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದರು. ಮೃತರ ಗೌರವಾರ್ಥ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿ, ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಆದೇಶಿಸಿತ್ತು.

ಅದರಂತೆ ಕಲಬುರಗಿ ತಹಶೀಲ್ದಾರ್​​ ಪ್ರಕಾಶ ಕುದರೆ ಅವರು ಜಿಲ್ಲಾಡಳಿತ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮೃತರ ಗೌರವಾರ್ಥ ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.