ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಂದು ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಈ ವೇಳೆ ವಿಶ್ವಕರ್ಮ ಸಮುದಾಯದವರು ತಮ್ಮ ಕುಲವೃತ್ತಿಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಉಪ ವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಚುನಾವಣೆ ವಿಭಾಗದ ತಹಶೀಲ್ದಾರ್ ಎಚ್.ಎನ್ ಬಡಿಗೇರ, ಪದವಿಪೂರ್ವ ಶಿಕ್ಷಣ ಉಪನಿರ್ದೇಶಕ ಕೆ.ಚಿದಂಬರ, ಸಮಾಜದ ಮುಖಂಡರಾದ ಮಹಾಮಂಡಳಿಯ ಪ್ರಧಾನ ಕಾರ್ಯದರ್ಶಿ ವಸಂತ ಅರ್ಕಾಚಾರ್, ಅಶೋಕ ಹೊಸಕೋಟಿ, ಕಾಳಪ್ಪ ಮುಳಮುತ್ತಲ ಸೇರಿದಂತೆ ಇತರರು ಉಪಸ್ಥಿತರಿದ್ದರು.