ಚಾಮರಾಜನಗರ: ಕಾರ್ಯಕರ್ತರ ಬೃಹತ್ ಮೆರವಣಿಗೆಯೊಂದಿಗೆ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಚಾಮರಾಜೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಶಾಸಕರಾದ ಸಿ.ಎಸ್.ನಿರಂಜನ ಕುಮಾರ್, ಹರ್ಷವರ್ಧನ್, ಬಿಜೆಪಿ ಮುಖಂಡ ಪ್ರೊ.ಮಲ್ಲಿಕಾರ್ಜುನಪ್ಪ, ಹನುಮಂತಶೆಟ್ಟಿ, ರಾಮಚಂದ್ರು, ಪುತ್ರಿ ಲಕ್ಷ್ಮಿ ಇನ್ನಿತರರು ಸಾಥ್ ನೀಡಿದರು.