ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆಯ ಸಂಶುದ್ದೀನ್ (25) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿದ್ದ 40 ಸಾವಿರ ರೂ. ಮೌಲ್ಯದ 1 ಕೆಜಿಗೂ ಹೆಚ್ಚಿನ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಬಳಿಯಿದ್ದ ಮೊಬೈಲ್ ಫೋನ್, ನಗದು 110 ರೂ. ವಶಪಡಿಸಿಕೊಂಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.