ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ತುರ್ತು ದುರಸ್ಥಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಲಿರುವುದರಿಂದ ಪಾಲಿಕೆ ಈ ನಿರ್ಧಾರ ತೆಗೆದುಕೊಂಡಿದೆ.
ಇಂದಿನಿಂದ ಮೇ 27 ರವರೆಗೆ 8 ದಿನಗಳರವರೆಗೂ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ದಕ್ಷಿಣ ವಲಯದ ವಿದ್ಯುತ್ ಕಾರ್ಯಪಾಲಕ ಅಭಿಯಂತರರು ತಡರಾತ್ರಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.