ಕೋಲಾರ: ಇಲ್ಲಿನ ಜಿಲ್ಲಾಡಳಿತವು ವಿಶ್ವ ಪರಿಸರ ದಿನದ ಅಂಗವಾಗಿ ನಗರದ ವಿವಿಧೆಡೆ ಹಲವು ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
2ನೇ ಅಪರ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನಗರದ ಕೋರ್ಟ್ ಆವರಣದಲ್ಲಿ ಗಿಡಕ್ಕೆ ಪೂಜೆ ಮಾಡಿ, ಹತ್ತಾರು ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಹಾಗೂ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಗರದ ರೈಲ್ವೇ ನಿಲ್ದಾಣದ ಸಮೀಪ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಸಿಇಓ ಜಗದೀಶ್, ಎಸ್ಪಿ ರೋಹಿಣಿ ಕಟೋಜ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ನೂರಾರು ಸಸಿಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಿದರು.
ಪರಿಸರ ದಿನವೆಂಬ ಒಂದು ದಿನ ಮಾತ್ರ ಇಂತಹ ಕಾರ್ಯಕ್ರಮ ಮಾಡದೆ. ಉತ್ತಮ ವಾತಾವರಣಕ್ಕಾಗಿ ವರ್ಷವಿಡೀ ಪರಿಸರ ಸ್ನೇಹಿಯಾಗಿ ಬಾಳಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ ಕರೆ ನೀಡಿದರು.