ETV Bharat / briefs

ಬಾಗಲಕೋಟೆ: ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ

author img

By

Published : Oct 1, 2020, 4:56 PM IST

ಬಾಗಲಕೋಟೆ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ
ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ

ಬಾಗಲಕೋಟೆ: ಹಿರಿಯ ಜೀವಿಗಳು ಬದುಕಿರುವವರೆಗೂ ಸಮಾಜಕ್ಕೆ ಅವರ ಮಾರ್ಗದರ್ಶನ ಅವಶ್ಯವಾಗಿದೆ ಎಂದು ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಯಸ್ಸಾದ ಮೇಲೆ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು. ಸರ್ಕಾರ ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಿದ್ದು, ಅವುಗಳ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ತಾ.ಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ ಮಾತನಾಡಿ, ಆಧುನಿಕ ಯುಗದಲ್ಲಿ ಕೂಡ ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ಅವಶ್ಯವಾಗಿದೆ. ಅವಿಭಕ್ತ ಕುಟುಂಬದಲ್ಲಿ ಹಿರಿಯರಿಗೆ ಹೆಚ್ಚಿನ ಮಾನ್ಯತೆ ನೀಡಲಾಗುತ್ತಿತ್ತು. ಈಗ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿವೆ ಎಂದು ತಿಳಿಸಿದರು.

ಹಿರಿಯ ನಾಗರಿಕರಿಗೆ ಸನ್ಮಾನ:
ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಮಂಜೂನಾಥ ಹಡಪದ (ಸಂಗೀತ ಕ್ಷೇತ್ರ), ಶಿವಪ್ಪ ಹಾದಿಮನಿ (ಕೃಷಿ), ಹನಮಂತರಾಯ ಕಂಠಿ (ಕಲಾ ಕ್ಷೇತ್ರ), ಎನ್.ಬಿ ಮುರುಗೋಡ (ಶಿಕ್ಷಣ, ಸಾಹಿತ್ಯ, ಕಲಾ), ಯಂಕಪ್ಪ ಸುಗತೇಕರ (ಜಾನಪದ), ಎಂ.ಬಿ.ಉದುಪುಡಿ, ಪರಶುರಾಮ ಧರೆಗೊಂಡರ, ನೀಲಲೋಹಿತ ಸ್ವಾಮಿ (ಹಿರಿಯ ನಾಗರಿಕ ಕ್ಷೇತ್ರ), ಗೋಪಾಲ್ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಸಿ.ಶಿವಲಿಂಗಪ್ಪ, ವಿಕಲಚೇತರನ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಹಿರಿಯ ನಾಗರಿಕ ಸಂಗಪ್ಪ ಗೋಲಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.