ಧಾರವಾಡ: ತಂಬಾಕು ಮತ್ತು ನಿಕೋಟಿನ್ ಬಳಕೆಯ ಪದಾರ್ಥಗಳು ಯುವ ಸಮುದಾಯ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತವೆ. ಆದ್ದರಿಂದ ಅವುಗಳನ್ನು ಬಳಸದಂತೆ ಹೆಚ್ಚು ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ರಹಿತ ದಿನಾಚರಣೆ ಕುರಿತ ಘೋಷವಾಖ್ಯ ಮುದ್ರಿತ ಮಾಸ್ಕ್ಗಳನ್ನು ಜಿಲ್ಲಾಧಿಕಾರಿಗಳು ವಿತರಿಸಿರು.
ನಂತರ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿ, ಅವುಗಳ ಉತ್ಪಾದನೆ, ಸರಬರಾಜು ಮತ್ತು ಮಾರಾಟದ ಮೇಲೆ ನಿಯಂತ್ರಣ ಹೇರಲು ಭಾರತ ಸರಕಾರವು 2003 ರಲ್ಲಿ ತಂಬಾಕು ನಿಯಂತ್ರಣ (ಕೋಟ್ಪಾ) ಕಾನೂನು ಜಾರಿಗೊಳಿಸಿದೆ.
ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಿ ರೂ.200 ಗಳ ದಂಡವನ್ನು ಸ್ಥಳದಲ್ಲಿಯೇ ವಿಧಿಸಿ, ವಸೂಲು ಮಾಡಲು ಅಧಿಕಾರ ನೀಡಿದೆ ಎಂದು ತಿಳಿಸಿದರು.
ತಂಬಾಕು ಹಾಗೂ ನಿಕೋಟಿನ್ ಪದಾರ್ಥಗಳನ್ನು ಸೇವಿಸುವುದು ಒಂದು ಸಾಮಾಜಿಕ ಪಿಡುಗು ಆಗಿ ರೂಪುಗೊಂಡಿದೆ. ಇದರ ನಿಯಂತ್ರಣಕ್ಕೆ ಶಾಲೆ, ಕಾಲೇಜು ಸೇರಿದಂತೆ ಹೆಚ್ಚು ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯುವಕರಲ್ಲಿ, ಪಾಲಕರಲ್ಲಿ ತಂಬಾಕು ಸೇವನೆಯಿಂದ ಆಗುವ ಹಾನಿ, ರೋಗಗಳ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು “ ಯುವ ಪೀಳಿಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನೊಕೋಟಿನ್‍ನ ಬಳಕೆಯಿಂದ ರಕ್ಷಣೆ ಮಾಡುವುದು” ಎಂಬ ಘೋಷವಾಖ್ಯ ನೀಡಿ, ಇದರ ಸಂಬಂಧಿತ ಮಾಹಿತಿ ಶಿಬಿರ, ಸಾಮಾಜಿಕ ಅರಿವು ಉಂಟು ಮಾಡುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದೆ.
ಧಾರವಾಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದ ಹೆಚ್ಚು ಜನಸಂದಣಿ ಸೇರುವ ಸ್ಥಳಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಆರೋಗ್ಯ ಇಲಾಖೆಯ ಮೂಲಕ ವರ್ಷಪೂರ್ತಿ ಜನಜಾಗೃತಿ ಕಾರ್ಯಕ್ರಮಗಳನ್ನುಆಯೋಜಿಸಲಾಗುವುದು ಎಂದು ಹೇಳಿದರು.
ತಂಬಾಕು ಚಟ ಬಿಟ್ಟರೆ ಯುವ ಸಮುದಾಯದ ಅಭಿವೃದ್ಧಿ ಸಾಧ್ಯ: ಜಿಲ್ಲಾಧಿಕಾರಿ ದೀಪಾ ಚೋಳನ್ - Deepa cholan statement on Tobacco use
ಸಮಾಜದ ಅಭಿವೃದ್ಧಿಯಾಗಬೇಕು ಅಂದರೆ ಯುವ ಪೀಳಿಗೆ ತಂಬಾಕು ಮತ್ತು ನಿಕೋಟಿನ್ ಯುಕ್ತ ವಸ್ತುಗಳ ಸೇವನೆಯಿಂದ ಸಂಪೂರ್ಣವಾಗಿ ಹೊರ ಬರಬೇಕು ಎಂದು ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.