ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿಯ ಕಮಲಪುರದ ಬಳಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.
ಕಮಲಪುರದ ವಿನಯ್ ( 24) ಮೃತ ಯುವಕ ಎಂದು ತಿಳಿದುಬಂದಿದೆ. ಅಲ್ಲದೆ ಘಟನೆಯಲ್ಲಿ ಹಿಂಬದಿ ಸವಾರ ಆರೂಢಿ ಗ್ರಾಮದ ಶಶಿ ಎಂಬಾತ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.