ETV Bharat / business

ಕಾಶ್ಮೀರದಲ್ಲಿ ಬಂಡವಾಳ ಹೂಡಿಕೆಗೆ ಭಾರತೀಯ ಕೈಗಾರಿಕಾ ಒಕ್ಕೂಟ ಸಾಥ್​... - Finance Minister Nirmala Sitharaman

ಜಮ್ಮು ಮತ್ತು ಕಾಶ್ಮೀರದ ಉದ್ಯಮಿ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ನಾವು ಬಯಸುತ್ತೇವೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೂಡಿಕೆ ಮಾಡಲು ಸಿಐಐ ಬೆಂಬಲ ನೀಡಲಿದೆ ಎಂದು ಸಿಐಐನ ನಿಯೋಜಿತ ಅಧ್ಯಕ್ಷ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್​ನ ಎಂಡಿ/ ಸಿಇಒ ಉದಯ್ ಕೋಟಕ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆಶ್ವಾಸನೆ ನೀಡಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದೊಂದಿಗೆ ಹಣಕಾಸು ಸಚಿವೆ ಸಭೆ
author img

By

Published : Aug 9, 2019, 8:36 PM IST

ನವದೆಹಲಿ: ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ನಡೆದ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಡವಾಳ ಹೂಡಿಕೆಗೆ ಬೆಂಬಲ ನೀಡುವುದಾಗಿ ಉದ್ಯಮಿ ವಲಯದವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದ ಉದ್ಯಮಿ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಬಯಸುತ್ತೇವೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೂಡಿಕೆ ಮಾಡಲು ಸಿಐಐ ಬೆಂಬಲ ನೀಡಲಿದೆ ಎಂದು ಸಿಐಐನ ನಿಯೋಜಿತ ಅಧ್ಯಕ್ಷ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್​ನ ಎಂಡಿ/ ಸಿಇಒ ಉದಯ್ ಕೋಟಕ್ ಅವರು ಹಣಕಾಸು ಸಚಿವರಿಗೆ ಆಶ್ವಾಸನೆ ನೀಡಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದೊಂದಿಗೆ ಹಣಕಾಸು ಸಚಿವೆ ಸಭೆ

ಮಹೀಂದ್ರಾ ಬ್ಯಾಂಕ್ ಎಂಡಿ ಮತ್ತು ಸೀತಾರಾಮನ್ ಅವರ ನಡುವೆ ಆರ್ಥಿಕತೆಯ ವಿವಿಧ ಅಂಶಗಳ ಕುರಿತು ಸುಮಾರು ಒಂದು ಗಂಟೆ ಚರ್ಚಿಸಿದರು.

ಸಿಐಐನ ಸದಸ್ಯರು ವಿವಿಧ ಕ್ಷೇತ್ರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಣಕಾಸು ಸಚಿವರು ಹೂಡಿಕೆಯ ಅವಕಾಶಗಳ ಕುರಿತು ನಮ್ಮೊಂದಿಗೆ ಚರ್ಚಿಸಿದ್ದಾರೆ. ಆರ್ಥಿಕತೆ ಇನ್ನೂ ವೇಗವಾಗಿ ಬೆಳೆಯಬೇಕು ಎಂಬುದನ್ನು ನಾವು ಬಯಸುತ್ತೇವೆ ಎಂದು ಹೇಳಿದರು.

"ತೆರಿಗೆಗಳ ಸರಳೀಕರಣವನ್ನು ನಾವು ನೋಡುತ್ತಿದ್ದೇವೆ" ಎಂದು ಸೀತಾರಾಮನ್ ಅವರು ನೇರ ತೆರಿಗೆ ಸಂಹಿತೆಯ ಸಮಿತಿಯ ವರದಿಯನ್ನು ಆಗಸ್ಟ್ 15 ರಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಹೇಳಿದರು. ಸರ್ಕಾರ ಇದನ್ನು ತಕ್ಷಣ ಪರಿಗಣನೆಗೆ ತೆಗೆದುಕೊಳ್ಳುತ್ತದೆ.

ಕಾರ್ಪೊರೇಟ್‌ಗಳು ಎದುರಿಸುತ್ತಿರುವ ತೆರಿಗೆ ಕಿರುಕುಳ ಸಮಸ್ಯೆಗಳನ್ನು ಮೊದಲು ಕೇಳಲು ಮತ್ತು ಅರ್ಥಮಾಡಿಕೊಳ್ಳಲು ಅವರು ಶ್ರೇಣಿ 2 ನಗರಗಳನ್ನು ಒಳಗೊಂಡಂತೆ ದೇಶಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂದು ಅವರು ಸಿಐಐ ಸದಸ್ಯರಿಗೆ ಮಾಹಿತಿ ನೀಡಿದರು.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.