ನವದೆಹಲಿ; 2020-21ನೇ ಸಾಲಿನಲ್ಲಿ SEZ ಗಳಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸೇವೆ ಆಧಾರಿತ ರಫ್ತು ಪ್ರಮಾಣ ಸುಮಾರು 5.1 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು.
ಕೇಂದ್ರ ಸರ್ಕಾರ ಐಟಿ ವಲಯವನ್ನು ಉತ್ತೇಜಿಸಲು ವಿವಿಧ ಉಪಕ್ರಮಗಳನ್ನು ತೆಗೆದುಕೊಂಡ ಪರಿಣಾಮ ರಪ್ತು ಪ್ರಮಾಣದಲ್ಲಿ ಏರಿಕೆ ಆಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.
ನಾವೀನ್ಯತೆ, ಸುಧಾರಿತ ವಾಣಿಜ್ಯೀಕರಣ, ಸುಸ್ಥಿರ ಬೌದ್ಧಿಕ ಆಸ್ತಿ, ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳು ಮತ್ತು ವಿಶೇಷ ಕೌಶಲ್ಯ ಸೆಟ್‌ಗಳನ್ನು ಉತ್ತೇಜಿಸುವ ಮೂಲಕ ಭಾರತವನ್ನು ಜಾಗತಿಕ ಸಾಫ್ಟ್‌ವೇರ್ ಉತ್ಪನ್ನ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಸಾಫ್ಟ್‌ವೇರ್ ಉತ್ಪನ್ನಗಳ ರಾಷ್ಟ್ರೀಯ ನೀತಿ - 2019 ಅನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.
ಜಾಗತಿಕ ಸಾಫ್ಟ್‌ವೇರ್ ಉತ್ಪನ್ನ ಮಾರುಕಟ್ಟೆಯಲ್ಲಿ ಭಾರತದ ಪಾಲನ್ನು ಹತ್ತು ಪಟ್ಟು ಹೆಚ್ಚಿಸಲು ಮತ್ತು 2025 ರ ವೇಳೆಗೆ 3.5 ಮಿಲಿಯನ್ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಇದೇ ವೇಳೆ ಘೋಷಿಸಿದರು.
ಇದನ್ನು ಓದಿ:ಟಾಟಾ ಸನ್ಸ್ನ ಅಧ್ಯಕ್ಷರಾಗಿ ಎನ್.ಚಂದ್ರಶೇಖರ್ ಮರುನೇಮಕ