ETV Bharat / business

ಬ್ಯಾಂಕ್​ಗಳ ವಿಲೀನದಿಂದ ಒಂದೇ ಒಂದು ಹುದ್ದೆ​ ಕಡಿತವಾಗಲ್ಲ..  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಯ..

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಪ್ರಕ್ರಿಯೆಯಿಂದ ಒಬ್ಬನೇ ಒಬ್ಬ ನೌಕರನೂ ಕೆಲಸ ಕಳೆದುಕೊಳ್ಳುವುದಿಲ್ಲ. ಈ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಸೀತಾರಾಮನ್
author img

By

Published : Sep 1, 2019, 10:37 PM IST

ನವದೆಹಲಿ:ಎನ್​ಡಿಎ ಸರ್ಕಾರದ ಮೂರನೇ ಹಂತದಡಿಯ 10 ಬ್ಯಾಂಕ್​​ಗಳ ವಿಲೀನದಿಂದ ನೌಕರರು ಉದ್ಯೋಗಗಳನ್ನ ಕಳೆದುಕೊಳ್ಳಲಿದ್ದಾರೆ ಎಂಬ ಆಪಾದನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್​ಗಳ ವಿಲೀನ ಪ್ರಕ್ರಿಯೆಯಿಂದ ಒಬ್ಬನೇ ಒಬ್ಬ ನೌಕರನೂ ಕೆಲಸ ಕಳೆದುಕೊಳ್ಳುವುದಿಲ್ಲ. ಈ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ. ಬಂಡವಾಳ ಹೂಡಿಕೆ, ದೇಶದ ಆರ್ಥಿಕ ಸ್ಥಿತಿಯ ಸುಧಾರಣೆಗಾಗಿ 10 ಬ್ಯಾಂಕ್​​ಗಳನ್ನು ನಾಲ್ಕು ಹಂತದಲ್ಲಿ ವಿಲೀನಗೊಳಿಸಲಾಗುತ್ತಿದೆ. ಇದರಿಂದ ಬ್ಯಾಂಕ್​ಗಳ ನೌಕರರ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬುದು ಸುಳ್ಳು. ನಾವು ಯಾವುದೇ ಉದ್ಯೋಗಿಯನ್ನು ತೆಗೆದು ಹಾಕುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.