ನವದೆಹಲಿ: ಹೊಸ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ತಾಂತ್ರಿಕ ದೋಷಗಳನ್ನು ಮುಂದಿನ ಒಂದೆರಡು ವಾರಗಳಲ್ಲಿ ಸರಿಪಡಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸೀತಾರಾಮನ್, ಈ ವಿಚಾರವಾಗಿ ಇನ್ಫೋಸಿಸ್‌ಗೆ ನಿರಂತರವಾಗಿ ನೆನಪಿಸುತ್ತಿರುವುದಾಗಿ ಹೇಳಿದ್ದಾರೆ. ನಾನು ಇನ್ಫೋಸಿಸ್ ಅನ್ನು (ಹೊಸ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದ ಮಾರಾಟಗಾರ) ನಿರಂತರವಾಗಿ ನೆನಪಿಸುತ್ತಿದ್ದೇನೆ. ಇನ್ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರು ಅದನ್ನು ಬಗೆಹರಿಸುವ ಭರವಸೆಯೊಂದಿಗೆ ನನಗೆ ಸಂದೇಶ ಕಳುಹಿಸುತ್ತಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಎಲ್ಲ ರೀತಿಯ ತೊಂದರೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹೊಸ IT ಇ-ಫೈಲಿಂಗ್ ಪೋರ್ಟಲ್‌ನಲ್ಲಿ ದೋಷ: ನಿರ್ಮಲಾ ಹೇಳಿಕೆಗೆ ನಿಲೇಕಣಿ ವಿವರಣೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನದ ನಂತರ, ಹೊಸ ಇ - ಫೈಲಿಂಗ್ ಆದಾಯ ತೆರಿಗೆ ಪೋರ್ಟಲ್‌ನಲ್ಲಿ ಗಮನಿಸಿದ ಸಮಸ್ಯೆಗಳನ್ನು ಪರಿಹರಿಸಲು, ತಾವು ಮತ್ತು ತಮ್ಮ ತಂಡ ಕಾರ್ಯನಿರತವಾಗಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನಿಲೇಕಣಿ ಹೇಳಿದ್ದರು.