ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,202 ರೂಪಾಯಿ ಏರಿಕೆ ಕಂಡಿದ್ದು, 51,889 ರೂಪಾಯಿಗಳಿಗೆ ತಲುಪಿದೆ ಎಂದು ಹೆಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಮಾಹಿತಿ ನೀಡಿದೆ.
ಹಿಂದಿನ ದಿನ ಚಿನ್ನದ ಬೆಲೆ 10 ಗ್ರಾಮ್ಗೆ 50,687 ರೂಪಾಯಿ ಇತ್ತು. ಇದರ ಜೊತೆಗೆ ಬೆಳ್ಳಿಯ ಬೆಲೆ ಕೂಡಾ ಜಾಸ್ತಿಯಾಗಿದ್ದು, ಒಂದು ಕೆಜಿ ಬೆಳ್ಳಿಯ ಬೆಲೆ 2,148 ರೂಪಾಯಿಯಷ್ಟು ಏರಿಕೆ ಕಂಡಿದೆ. ಈಗ ಒಂದು ಕೆಜಿ ಬೆಳ್ಳಿಯ ಬೆಲೆ 67,956 ರೂಪಾಯಿ ತಲುಪಿದೆ. ಹಿಂದಿನ ವಹಿವಾಟಿನಲ್ಲಿ ಬೆಳ್ಳಿಯ ಬೆಲೆ ಕೆಜಿಗೆ 65,808 ರೂಪಾಯಿ ಇತ್ತು.
ಭಾರತದ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಸುಮಾರು 49 ಪೈಸೆಯಷ್ಟು ಭಾರತೀಯ ರೂಪಾಯಿ ಮೌಲ್ಯ ಕುಸಿದಿದ್ದು, ಈಗ ಒಂದು ಅಮೆರಿಕನ್ ಡಾಲರ್ನ ಮೌಲ್ಯ 75.82 ರೂಪಾಯಿಯಷ್ಟಾಗಿದೆ.
ಇದನ್ನೂ ಓದಿ:ಉಕ್ರೇನ್ನಲ್ಲಿ ಭಾರತೀಯರ ರಕ್ಷಣೆಗೆ ಮಾನವೀಯ ಕಾರಿಡಾರ್ ರಚನೆ: ರಷ್ಯಾ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ಬೆಲೆ ಒಂದು ಔನ್ಸ್ಗೆ 1,943 ಅಮೆರಿಕನ್ ಡಾಲರ್ ಇದೆ. ಚಿನ್ನದ ಬೆಲೆ ಏರಿಕೆಯೇ ಅಮೆರಿಕನ್ ಡಾಲರ್ ಮೌಲ್ಯ ಸ್ವಲ್ಪ ಮಟ್ಟಿಗೆ ಹೆಚ್ಚಿಸಲು ಕಾರಣವಾಗಿದೆ ಎಂದು ಹೆಚ್‌ಡಿಎಫ್‌ಸಿ ಸೆಕ್ಯೂರಿಟೀಸ್ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ತಿಳಿಸಿದ್ದಾರೆ.
ಉಕ್ರೇನ್ ಮತ್ತು ರಷ್ಯಾ ಯುದ್ಧದ ನಡುವೆಯೇ ಅಮೆರಿಕನ್ ಡಾಲರ್ ಬೆಲೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.